ನವದೆಹಲಿ:ಅನ್ನಭಾಗ್ಯ ಯೋಜನೆಗೆ ಬೇಕಾಗಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆಹಾರ ಸಚಿವ ಕೆ.ಎಚ್​. ಮುನಿಯಪ್ಪ ಆರೋಪಿಸಿದ್ದಾರೆ.
ಕೇಂದ್ರ ಸಚಿವ ಪಿಯೂಷ್​ ಗೋಯಲ್​ ಭೇಟಿ ಬಳಿಕ ಮಾತನಾಡಿದ ಮುನಿಯಪ್ಪ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ. ಆದರೆ, ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿದ್ಧಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ: ಸಿ.ಪಿ. ಯೋಗೇಶ್ವರ್​
ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇದ್ದರೂ ಸಹ ರಾಜಕೀಯ ದುರುದ್ದೇಶದಿಂದ ನಮ್ಮ ಬೇಡಿಕೆಯನ್ನು ನಿರಾಕರಿಸಿದ್ಧಾರೆ. ಸಚಿವ ಪಿಯೂಶ್​ ಗೋಯೆಲ್​ರನ್ನು ಭೇಟಿ ಮಾಡಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಸಿದ್ದೇನೆ. ಆದರೂ, ಅವರು ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ ಎಂದು ಕಿಡಿಕಾರಿದ್ಧಾರೆ.
ಕೇಂದ್ರ ಸಚಿವರು 300 ಲಕ್ಷ ಅಕ್ಕಿಯನ್ನು ಟನ್​ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ತರುತ್ತದೆ ಎಂದು ಸಚಿವ ಕೆ.ಎಚ್​.ಮುನಿಯಪ್ಪ ತಿಳಿಸಿದ್ಧಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 1 =
Remember me
