ಬೆಂಗಳೂರುಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಬುಧವಾರ (ಆ.30) ಬೆಳಿಗ್ಗೆ 11 ಗಂಟೆಯಿಂದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇಚ್ಛೆಯ ಆದ್ಯತೆಗಳನ್ನು ನಮೂದಿಸಲು ಸೆ.2ರ ಮಧ್ಯಾಹ್ನ 2 ಗಂಟೆಯವರೆಗೆ ಕಾಲಾವಕಾಶ ಕೊಡಲಾಗಿದ್ದು, ಸೆ.4ರಂದು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಇದರಲ್ಲಿ ಸೀಟುಗಳ ಲಭ್ಯತೆಯನ್ನು ತೋರಿಸದೆ ಇದ್ದರೂ ಸಹ ಅಭ್ಯರ್ಥಿಗಳು ತಮ್ಮ ಆದ್ಯತೆಗಳನ್ನು ಬದಲಿಸಲು ಅವಕಾಶ ಇರುತ್ತದೆ. ಆದರೆ ಅಭ್ಯರ್ಥಿಗಳಿಗೆ ತಮ್ಮ ರ‌್ಯಾಂಕ್ ಸರದಿಯ ನಂತರ ಉದ್ಭವಿಸುವ ಸೀಟುಗಳನ್ನು ಪಡೆಯಲು ಅವಕಾಶವಿರುವುದಿಲ್ಲ ಎಂದಿದ್ದಾರೆ.
ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾದ ನಂತರ ಅಭ್ಯರ್ಥಿಗಳಿಗೆ ತಮ್ಮ ಆದ್ಯತೆಗಳನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಆದರೆ, ತಮಗೆ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯವಾಗಿದೆ. ಆದ್ದರಿಂದ ಅಭ್ಯರ್ಥಿಗಳು ಮತ್ತು ಪಾಲಕರು ತಮಗೆ ಇಷ್ಟವಿರುವ ಕಾಲೇಜನ್ನು ಮಾತ್ರ ದಾಖಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.inನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − sixteen =
Remember me
