ಬೆಂಗಳೂರುಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ-2024) ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಈ ಮೊದಲು ಏ.20 ಮತ್ತು 21ರಂದು ಪರೀಕ್ಷೆ ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿತ್ತು. ಆದರೆ, ಅದೇ ದಿನ (ಏ.21) ಎನ್‌ಡಿಎ ಪರೀಕ್ಷೆ ನಿಗದಿಯಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ದಿನಾಂಕವನ್ನು ಪರಿಷ್ಕರಣೆ ಮಾಡಲಾಗಿದೆ. ಏ.18ರಿಂದ 20ರ ವರೆಗೆ ನಡೆಸಲಾಗುತ್ತಿದೆ.
ಏ.18ರ ಬೆಳಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, 19ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.20ರಂದು ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.
ಅರ್ಜಿ ಸಲ್ಲಿಕೆ ಆರಂಭ:
ಪರೀಕ್ಷೆ ಬರೆಯಲು ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ಜ.10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಈ ಸೂಚನೆ ಅನ್ವಯಿಸಲಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರಿಯಾದ ಆರ್.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
