ಬೆಂಗಳೂರು:ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಏ.20, 21ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಯಲಿದೆ. ಬರುವ ಜ.10ರಿಂದ ನಿಗದಿತ ಶುಲ್ಕ ಪಾವತಿಸಿ ಆನ್​ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕರ್ನಾ ಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.
ಏ.20ರ ಬೆಳಿಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, ಏ.21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿ ಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ವ, ಫಾರ್ವ-ಡಿ, ದ್ವಿತೀಯ ವರ್ಷದ ಬಿ.ಫಾರ್ವ, ಕೃಷಿ ಕೋರ್ಸ್​ಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್​ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಇದು ಅನ್ವಯಿಸುತ್ತದೆ. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್​ಡಿ ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ರಮ್ಯಾ ತಿಳಿಸಿದರು.
2023ರಲ್ಲಿ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಬಾಬ್ತಿನ ಮೊತ್ತವನ್ನು ಹಿಂದಿರುಗಿಸುತ್ತಿದೆ. ಕೆಲವರ ಅರ್ಜಿಗಳಲ್ಲಿ ಬ್ಯಾಂಕ್ ವಿವರ ತಪ್ಪಾಗಿದ್ದು, ಅಂಥವರ ಹೆಸರುಗಳನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ.ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು ಎಂದರು.
ಬಿಇಗೆ ನೇರ ಪ್ರವೇಶ: ಇಂಜಿನಿಯರಿಂಗ್​ನ 3ನೇ ಸೆಮಿಸ್ಟರ್​ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಯಲಿದೆ. ಇದಕ್ಕೆ ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್ ತೆರೆಯಲಾಗುವುದು. ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್​ಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇದರ ಅರ್ಜಿ ಸಲ್ಲಿಕೆಗೂ ಪೋರ್ಟಲ್ ತೆರೆಯಲಾಗುವುದು ಎಂದು ರಮ್ಯಾ ಹೇಳಿದರು.
ಕುಂದಾಪುರದಲ್ಲಿ ಬಸ್​ ಚಕ್ರದಡಿಗೆ ಸಿಲುಕಬೇಕಿದ್ದ ಸೈಕಲ್​​ ಸವಾರ ಪವಾಡ ರೀತಿ ಪಾರು! ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + twelve =
Remember me
