ಬೆಂಗಳೂರು:ಸಿಇಟಿ ಪರೀಕ್ಷೆ ಇಂದು(ಗುರುವಾರ) ರಾಜ್ಯದೆಲ್ಲೆಡೆ ಆರಂಭವಾಗಿದೆ. ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 497 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದೆ. ಕರೊನಾ ಸೋಂಕಿತ ವಿದ್ಯಾರ್ಥಿಗಳು ಪಿಪಿಇ ಕಿಟ್ ಧರಿಸಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದು, ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬೆಂಗಳೂರಿನ ಮಲ್ಲೇಶ್ವರದ ಎಂಇಎಸ್ ಕಾಲೇಜು ಹಾಗೂ ಶೇಷಾದ್ರಿಪುರಂ ಕಾಂಪೋಸಿಟ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಕೈಗೊಂಡಿರುವ ಎಲ್ಲ ಎಚ್ಚರಿಕೆ ಕ್ರಮಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದರು. ಸಾರಿಗೆ, ಆರೋಗ್ಯ, ಪೊಲೀಸ್ ಮತ್ತು ಉನ್ನತ ಶಿಕ್ಷಣ ಇಲಾಖೆಗಳೆಲ್ಲ ಸೇರಿ ಕೈಗೊಂಡಿರುವ ಕ್ರಮಗಳ ಬಗ್ಗೆ ಡಿಸಿಎಂ ಮೆಚ್ವುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿರಿಖಾಸಗಿ ಆಸ್ಪತ್ರೆಗಳ ವಸೂಲಿ ದಂಧೆಗೆ ಬ್ರೇಕ್​ ಹಾಕಲು ಐಪಿಎಸ್​ ಅಧಿಕಾರಿ ಡಿ. ರೂಪಾ ಟೀಂ ಸಜ್ಜು
ಬೆಂಗಳೂರು ನಗರದ 83 ಕೇಂದ್ರಗಳಲ್ಲಿ, 40,200 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 12, ಬಳ್ಳಾರಿ 6, ಚಿತ್ರದುರ್ಗದಲ್ಲಿ ಒಬ್ಬರು ಸೇರಿದಂತೆ ರಾಜ್ಯದಾದ್ಯಂತ ಕರೊನಾ ಸೋಂಕಿತ 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.
ಕರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಅವರಿದ್ದ ಸ್ಥಳದಿಂದಲೇ ಪರೀಕ್ಷಾ ಕೇಂದ್ರಕ್ಕೆ ಆಂಬುಲೆನ್ಸ್ ನಲ್ಲಿ ಕರೆತರಲಾಗಿದೆ. ಮತ್ತೆ ಅವರನ್ನು ನಮ್ಮ ಸಿಬ್ಬಂದಿಯೇ ವಾಪಸ್ ಬಿಡುವರು. ಕೋವಿಡ್‌ ಹಿನ್ನೆಲೆಯಲ್ಲಿ 30 ಸಾವಿರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಂಡಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆ ಆಗಿಲ್ಲ ಎಂದು ಉಪ ಮುಖ್ಯಮಂತ್ರಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಜತೆಗೆ, ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರಲ್ಲದೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ಏನಾದರೂ ಸಮಸ್ಯೆ ಆಯತೇ? ಬಸ್ ವ್ಯವಸ್ಥೆ ಇತ್ತೆ? ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿತೆ? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಮಾಹಿತಿ ಪಡೆದರು.
ಕೋವಿಡ್-19 ಹಿನ್ನೆಲೆ ಹಾಗೂ ಹೈಕೋರ್ಟ್ ನೀಡಿರುವ ಸೂಚನೆಯ ಅನುಸಾರ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಬಳಕೆ, ದೈಹಿಕ ಅಂತರ ಇತ್ಯಾದಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳನ್ನು ಕೂರಿಸಲಾಗಿದೆ. ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಈ ವರ್ಷ ಫಲಿತಾಂಶ ಬಂದ ನಂತರ ಕೌನ್ಸೆಲಿಂಗ್ ಸೇರಿ ಎಲ್ಲ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ಆನ್​ಲೈನ್​ನಲ್ಲೇ ನಡೆಸಲಾಗುವುದು. ವಿದ್ಯಾರ್ಥಿ ಮತ್ತು ಪೋಷಕರು ಸಿಇಟಿ ಘಟಕಕ್ಕೆ ಬರುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ಕಾಲೇಜನ್ನು ಆಯ್ಕೆ ಮಾಡಿಕೊಂಡ ಮೇಲೆ ನೇರವಾಗಿ ಕಾಲೇಜಿಗೆ ಹೋಗಿ ಪ್ರವೇಶ ಪಡೆಯಬಹುದು ಎಂದು ಡಿಸಿಎಂ ಹೇಳಿದರು.
ಒಂದು ಸಾವಿರ ಕರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ: ಡಾ.ಗಿರಿಧರ್ ಕಜೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 14 =
Remember me
