ಬೆಂಗಳೂರು:ಕರೊನಾ ಆತಂಕದ ನಡುವೆಯೂ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರ್ಕಾರ ಇದೀಗ, ಜು.30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ನಡೆಸಲು ತೀರ್ವನಿಸಿದೆ.
ಉನ್ನತ ಶಿಕ್ಷಣ ಖಾತೆ ಸಚಿವ, ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಈ ವಿಷಯ ಪ್ರಕಟಿಸಿದರು. ಕರೊನಾ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಕೈಗೊಂಡ ಎಲ್ಲ ಮುನ್ನೆಚ್ಚರಿಕೆ ಕ್ರಮ ಸಿಇಟಿಗೂ ಕೈಗೊಳ್ಳಲಾಗುವುದು. ಗಡಿನಾಡು ವಿದ್ಯಾರ್ಥಿಗಳ ಕನ್ನಡ ಪರೀಕ್ಷೆಯನ್ನು ಆ.1ರಂದು ನಡೆಸಲಾಗುವುದು. ರಾಜ್ಯದಲ್ಲಿ 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದರು.
ಬೆಂಗಳೂರಿನಲ್ಲಿ 83 ಕೇಂದ್ರ: ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿಯರೂ ಇದ್ದಾರೆ. ಪರೀಕ್ಷೆಯ ಸಮಯ ಬೆಳಗ್ಗೆ 10.30ರಿಂದ 11.50 ಹಾಗೂ ಮಧ್ಯಾಹ್ನ 2.30 ರಿಂದ 3.30 ಎಂದು ಮಾಹಿತಿ ನೀಡಿದರು.
ಪಾಸಿಟಿವ್ ವಿದ್ಯಾರ್ಥಿಗಳಿಗೂ ಅವಕಾಶ: ಕರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ. ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ. ಕರೊನಾ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುವುದು ಎಂದು ಉಪಮá-ಖ್ಯಮಂತ್ರಿ ತಿಳಿಸಿದರು.
ಕ್ವಾರಂಟೈನ್ ವಿನಾಯಿತಿ: ಸಿಇಟಿ ಎದುರಿಸುತ್ತಿರುವ ವಿದೇಶಿ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜತೆ ಬಂದಿರುವ ಪಾಲಕರಿಗೆ 4 ದಿನ ಕ್ವಾರಂಟೈನ್​ನಿಂದ ವಿನಾಯಿತಿ ನೀಡಲಾಗಿದೆ. ಅವರೂ ಎಲ್ಲ ರೀತಿಯಲ್ಲೂ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಗಡಿನಾಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೇ ಬರಬೇಕಾಗಿಲ್ಲ. 188 ಮಂದಿ ಅಂತಹ ವಿದ್ಯಾರ್ಥಿಗಳಿದ್ದು, ಅವರು ಗಡಿ ಭಾಗದಲ್ಲಿರುವ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್​ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕರೊನಾ ಕಾರಣಕ್ಕೆ ಈಗಾಗಲೆ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲಿಯೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದರು. ಅಂತಿಮ ವರ್ಷದ ಪರೀಕ್ಷೆಗಳು ನಡೆಯದ ಕಾರಣ ಪಿಜಿ ಹಾಗೂ ಡಿಪ್ಲೊಮಾ ಸಿಇಟಿಗಳನ್ನು ಮುಂದೂಡಲಾಗಿದೆ. ನಿಗದಿಯಂತೆ ಈ ಪರೀಕ್ಷೆಗಳು ಕ್ರಮವಾಗಿ ಆ.8, 9, 10 ರಂದು ನಡೆಯಬೇಕಾಗಿತ್ತು.
ಆನ್​ಲೈನ್​ನಲ್ಲಿ ಕೌನ್ಸೆಲಿಂಗ್
ಈ ವರ್ಷ ಸಿಇಟಿ ಕೌನ್ಸೆಲಿಂಗ್, ದಾಖಲೆಗಳ ಪರಿಶೀಲನೆ ಸೇರಿ ಎಲ್ಲವೂ ಆನ್​ಲೈನ್​ನಲ್ಲಿ ನಡೆಯಲಿದೆ. ಇದೆಲ್ಲವನ್ನೂ ವಿದ್ಯಾರ್ಥಿಗಳು ಮನೆಯಿಂದಲೇ ಪೂರೈಸಬಹುದು. ಅಂತಿಮವಾಗಿ ತಾವು ಆಯ್ಕೆ ಮಾಡಿಕೊಳ್ಳುವ ಕಾಲೇಜಿಗೆ ತೆರಳಿ ಪ್ರವೇಶಾತಿ ಪಡೆಯಬಹುದು. ಈಗಾಗಲೆ ಎಲ್ಲ ವಿವಿಗಳಲ್ಲಿ ಪ್ರವೇಶಗಳು ಆರಂಭವಾಗಿವೆ. ಉನ್ನತ ಶಿಕ್ಷಣ ಇಲಾಖೆಯ ಎಲ್ಲ ಚಟುವಟಿಕೆ ಆರಂಭವಾಗಿವೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.‘
ಲಾಕ್​ಡೌನ್​ ತೆರವು; ಕರೊನಾ ವಿರುದ್ಧ ಹೋರಾಟಕ್ಕೆ ಏನಿದು 5 T ಸೂತ್ರ? ಜನರ ಸಹಕಾರಕ್ಕೆ ಸಿಎಂ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eleven =
Remember me
