ಬೆಂಗಳೂರು:ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ನಗರದ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.
ಮುಖ್ಯವಾಗಿ, ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಸಮೀಪದಲ್ಲಿರುವ ಪರೀಕ್ಷಾ ಕೇಂದ್ರ ಸೇರಿದಂತೆ ಬೆಂಗಳೂರಿನ ಎಲ್ಲ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವವರು ಬೆಳಿಗ್ಗೆ 8.30ರ ಹೊತ್ತಿಗೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಇದನ್ನೂ ಓದಿ:ಮೇಲ್ನೋಟಕ್ಕೆ ಯಾವುದೇ ಉಲ್ಲಂಘನೆ ಆಗಿಲ್ಲ: ಅದಾನಿ ಗ್ರೂಪ್​ಗೆ ಕ್ಲೀನ್​ಚಿಟ್​ ಕೊಟ್ಟ ಸುಪ್ರೀಂಕೋರ್ಟ್​ ಸಮಿತಿ
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಧ್ಯಾಹ್ನ ನಡೆಯಲಿರುವ ಗಣಿತದ ಪರೀಕ್ಷೆ ಮಾತ್ರ ಬರೆಯುತ್ತಿರುವವರು ಸಹ ಪರೀಕ್ಷಾ ಕೇಂದ್ರಗಳನ್ನು ಬೆಳಿಗ್ಗೆಯೇ ತಲುಪುವುದು ಒಳ್ಳೆಯದು. ಏಕೆಂದರೆ, ಪ್ರಮಾಣವಚನ ಸಮಾರಂಭದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ ಎಂದಿದ್ದಾರೆ.
ಒಂದು ವೇಳೆ ಅಭ್ಯರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡಲ್ಲಿ ಪರೀಕ್ಷಾ ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಿದರೆ ಅಂತಹವರನ್ನು ಆದಷ್ಟು ಬೇಗ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜತೆಗೆ, ವಿಠಲ ಮಲ್ಯ ರಸ್ತೆಯಲ್ಲಿನ ಸೆಂಟ್ ಜೋಸೆಫ್ಸ್ ಇಂಡಿಯನ್ ಪಿಯು ಕಾಲೇಜು ಕಂಠೀರವ ಕ್ರೀಡಾಂಗಣಕ್ಕೆ ತುಂಬಾ ಹತ್ತಿರದಲ್ಲಿದೆ. ಹೀಗಾಗಿ ಈ ಕೇಂದ್ರದಲ್ಲಿ ಸಿಇಟಿ ಬರೆಯುತ್ತಿರುವವರಿಗೆ ಮಾತ್ರ ಬೆಳಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ವಿಶ್ವದ ಅತ್ಯಂತ ದುಬಾರಿ ಐಸ್ ಕ್ರೀಮ್ ಯಾವುದು ಗೊತ್ತಾ? ಲಕ್ಷಾಂತರ ರೂ. ಬೆಲೆ ಬಾಳುತ್ತೆ ಈ ಐಸ್​ ಕ್ರೀಮ್​​
ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ; ಸಂಚಾರ ಮಾರ್ಗ ಮಾರ್ಪಾಡು

ಸೀರಿಯಲ್​ ನಟಿಯರೊಂದಿಗೆ ವೇದಿಕೆ ಹಂಚಿಕೊಳ್ಳಲು ಇಷ್ಟವಿಲ್ಲ ಎಂದ ರಾಜಕಾರಣಿಗೆ ತಿರುಗೇಟು ಕೊಟ್ಟ ನಟಿ!

ಚಂಡಮಾರುತದ ರಭಸಕ್ಕೆ ಆಕಾಶದಲ್ಲಿ ಹಾರಾಡಿದ ಸೋಫಾ; ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
