ಬೆಂಗಳೂರು:ಇಂಜಿನಿಯರಿಂಗ್​ ಸೇರಿ ವೃತ್ತಿಪರ ಕೋರ್ಸ್​ಗಳಿಗೆ ನಡೆಸಲಾಗುವ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕ ಘೋಷಿಸಲಾಗಿದೆ.
ಜುಲೈ 30 ಹಾಗೂ 31ರಂದು ರಾಜ್ಯಾದ್ಯಂತ ಸಿಇಟಿ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ;ಶಾಲೆಗಳು ಪುನರಾರಂಭವಾದಾಗ ಹೀಗಿದ್ದರೆ ಚೆನ್ನ..!
ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಭ್ಯರ್ಥಿಗಳ ನಡುವೆ ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಹೀಗಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.ಐಐಟಿ ಸೇರಿ ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್​ ಕಾಲೇಜುಗಳ ಪ್ರವೇಶಕ್ಕೆ ನಡೆಸಲಾಗುವ ಜೆಇಇ ಹಾಗೂ ವೈದ್ಯಕೀಯ ಕೋರ್ಸ್​ಗಳ ಆಯ್ಕೆಗೆ ನಡೆಸುವ ನೀಟ್​ಗೆ ಆಹಜರಾಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವೇಳಾಪಟ್ಟಿ ನಿಗದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸಿಇಟಿಗೆ ಸಜ್ಜಾಗಲು ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಆರಂಭಿಸಲಾಗಿದ್ದ ‘ಗೆಟ್​, ಸೆಟ್​ ಗೋ’ ಕ್ರ್ಯಾಶ್​ ಕೋರ್ಸ್​ಗೆ ಭಾರಿ ಸ್ಪಂದನೆ ವ್ಯಕ್ತವಾಗಿದೆ ಎಂದು ಡಿಸಿಎಂ ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ;ವಿಶಾಖಪಟ್ಟಣ ವಿಷಾನಿಲ ದುರಂತಕ್ಕೆ ಯಾರೂ ಕಾರಣರಲ್ಲ…!
ಕಾಲೇಜುಗಳಲ್ಲಿ ನೂತನ ಶೈಕ್ಷಣಿಕ ವರ್ಷಾರಂಭ ಸೆಪ್ಟೆಂಬರ್​ ಒಂದರಿಂದ ಆರಂಭವಾಗಲಿದೆ ಎಂದು ಅಶ್ವತ್ಥ ನಾರಾಯಣ್​ ತಿಳಿಸಿದರು.ವಿವರಗಳಿಗೆ https://cetonline.karnataka.gov.in/kea ಸಂಪರ್ಕಿಸಿ.
ಕೇಂದ್ರದಿಂದ ಬಡವರ ಖಾತೆಗೆ ಬರಲಿದೆ ಮತ್ತೊಂದು ಸುತ್ತಿನ ಹಣ..?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × three =
Remember me
