ಬೆಂಗಳೂರು:ವಿಧಾನಪರಿಷತ್‌ನ ಸಭಾಪತಿಯಾಗಿ ಜಾತ್ಯತೀತ ಜನತಾದಳದ ನಾಯಕ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹೊರಟ್ಟಿ ಅವರ ಆಯ್ಕೆಯನ್ನು ಇಂದು ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮಗೊಳಿಸುವ ನಿರೀಕ್ಷೆ ಇದೆ.
ಹೊರಟ್ಟಿ ಅವರ ರಾಜಕೀಯ ಹಿನ್ನೆಲೆ ಕುರಿತು ಬಿಜೆಪಿ ಹೈಕಮಾಂಡ್ ನಾಯಕರು ರಾಜ್ಯ ಮಟ್ಟದ ನಾಯಕರಿಂದ ವರದಿ ಕೇಳಿದ್ದು, ಸಕಾರಾತ್ಮಕ ವರದಿ ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್‌ಗೆ ಸಭಾಪತಿ ಸ್ಥಾನ ನೀಡಿ, ಉಪಸಭಾಪತಿ ಸ್ಥಾನಕ್ಕೆ ಬಿಜೆಪಿ ನಾಯಕರೊಬ್ಬರನ್ನು ಆಯ್ಕೆ ಮಾಡಲು ಇಂದಿನ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿರಿಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…
ಒಂದು ವೇಳೆ ಬಿಜೆಪಿಯವರೇ ಸಭಾಪತಿ ಸ್ಥಾನ ಅಲಂಕರಿಸಬೇಕೆಂಬ ಧ್ವನಿ ಸಭೆಯಲ್ಲಿ ಕೇಳಿಬಂದರೆ ಆಗ ಏನು ಮಾಡಬೇಕು ಎಂಬುದರ ಕುರಿತೂ ನಾಯಕರ ಮಟ್ಟದಲ್ಲಿ ಈಗಾಗಲೇ ಚರ್ಚೆ ನಡೆದಿದೆ. ಇಂದು ರಾತ್ರಿಯ ವೇಳೆಗೆ ಈ ಕುರಿತು ಸ್ಪಷ್ಟ ಮಾಹಿತಿ ಹೊರಬೀಳಲಿದೆ. ಸಭಾಪತಿ ಸ್ಥಾನವನ್ನು ತನಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರು ಈಗಾಗಲೇ ಬಿಜೆಪಿ ಮುಂದೆ ಬೇಡಿಕೆ ಇಟ್ಟಿದ್ದಾರೆ.ಇದನ್ನೂ ಓದಿರಿಮಾತು ತಪ್ಪಿದ್ರೆ ಮನೆ ಹಾಳಾಗುತ್ತೆ… ಧರ್ಮಸ್ಥಳ ಶ್ರೀಕ್ಷೇತ್ರದಲ್ಲಿ ಕರ್ಪೂರ ಹಚ್ಚಿ ಜೆಡಿಎಸ್​-ಬಿಜೆಪಿ ಬೆಂಬಲಿತರ ಆಣೆ-ಪ್ರಮಾಣ!
ಈಗ ವಿಧಾನಪರಿಷತ್ತಿನಲ್ಲಿ ಬಿಜೆಪಿಯ 31 ಸದಸ್ಯರಿದ್ದು, ಕಾಂಗ್ರೆಸ್ 28 ಮತ್ತು ಜೆಡಿಎಸ್ 13 ಸದಸ್ಯರನ್ನು ಹೊಂದಿವೆ. ಕಾಂಗ್ರೆಸ್‌ನ ಕೆ. ಪ್ರತಾಪಚಂದ್ರ ಶೆಟ್ಟಿ ಈಗ ಸಭಾಪತಿಯಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಕೈಜೋಡಿಸಿದರೆ, ಈ ಸ್ಥಾನವನ್ನು ಕಾಂಗ್ರೆಸ್ ಕಳೆದುಕೊಳ್ಳುವುದು ನಿಶ್ಚಿತ. ಒಂದು ತಿಂಗಳ ಹಿಂದೆ ನಡೆದ ವಿಧಾನಪರಿಷತ್ ಅಧಿವೇಶನದಲ್ಲಿ ಪ್ರತಾಪಚಂದ್ರ ಶೆಟ್ಟಿ ಅವರ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿ ಅದಕ್ಕೆ ಜೆಡಿಎಸ್‌ನ ಬೆಂಬಲವನ್ನು ಕೂಡ ಕ್ರೋಡೀಕರಿಸಿತ್ತು. ಆದರೆ ಸದನದಲ್ಲಿ ಭಾರಿ ಗಲಾಟೆ ನಡೆದು, ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಯಿತು. ಆಗ ಜೆಡಿಎಸ್‌ನ ಎಸ್.ಎಲ್. ಧರ್ಮೇಗೌಡ ಅವರನ್ನು ಸಭಾಪತಿಯನ್ನಾಗಿಸುವ ಪ್ರಯತ್ನ ನಡೆದಿತ್ತು. ನಂತರ ನಡೆದ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಧರ್ಮೇಗೌಡ ಅವರು ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೂ ನಡೆಯಿತು. ನಿನ್ನೆ ರಾತ್ರಿ ನಡೆದ ಜೆಡಿಎಸ್ ಸಭೆಯಲ್ಲಿ ಹೊರಟ್ಟಿ ಅವರನ್ನು ಸಭಾಪತಿಯಾಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು ಎನ್ನಲಾಗಿದೆ.
5 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಪೊಲೀಸಪ್ಪನ ಪತ್ನಿ ದುರಂತ ಸಾವು: ಗರ್ಭಿಣಿ ಡೆತ್​ ಕೇಸ್​ ಮುಚ್ಚಿಹಾಕಲು ಹುನ್ನಾರ?

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

ಸ್ವಂತ ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
