ಬೆಂಗಳೂರು:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂ. ಪಡೆದು ವಂಚಿಸಿದ್ದಾಳೆ ಎಂಬ ಆರೋಪದ ಮೇಲೆ ಸಿಕ್ಕಿಬಿದ್ದಿರುವ ಚೈತ್ರ ಕುಂದಾಪುರ ಮತ್ತೆ ಮತ್ತೆ ಕಣ್ಣೀರು ಹಾಕಿದ್ದಾಳೆ. ಪೊಲೀಸರ ಬಳಿ ಅತ್ತಿರುವ ಚೈತ್ರಾ, ಬಳಿಕ ನ್ಯಾಯಾಧೀಶರ ಮುಂದೆಯೂ ಅತ್ತು ಅಲವತ್ತುಕೊಂಡಿದ್ದಾಳೆ.
ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಚೈತ್ರಾ ಹಾಗೂ ಇತರ ಆರೋಪಿಗಳನ್ನು ಪ್ರಾಥಮಿಕ ತನಿಖೆಗೆ ಒಳಪಡಿಸಿದ ಬಳಿಕ ಇಂದು ಮೂರನೇ ಎಸಿಎಂಎಂ ಕೋರ್ಟ್​ನಲ್ಲಿ ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ನ್ಯಾಯಾಧೀಶರ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾಳೆ.
ಉಡುಪಿ ಪೊಲೀಸರು ಸ್ವಲ್ಪ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿರುವ ಚೈತ್ರಾ, ಪೊಲೀಸರು ಬಂಧನದ ಬಗ್ಗೆ ನಮ್ಮ ಮನೆಯವರಿಗೆ ಮಾಹಿತಿ ನೀಡಿರಲಿಲ್ಲ ಎಂದಿದ್ದಾಳೆ. ಫೋನ್ ನಂಬರ್ ಕೊಟ್ಟರೂ ಕರೆ ಮಾಡಿಲ್ಲ, ಉಡುಪಿ ಪೊಲೀಸರು ತೊಂದರೆ ಕೊಟ್ಟಿದ್ದಾರೆ, ಬೆಂಗಳೂರು ಪೊಲೀಸರು ತೊಂದರೆ ಮಾಡಿಲ್ಲ ಎಂದಿದ್ದಾಳೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ದೂರು ಯಾರು ನೀಡಿದ್ದಾರೆ, ಏನು ದೂರು ಎಂಬುದು ಗೊತ್ತಿಲ್ಲ ಎಂದಿರುವ ಚೈತ್ರಾ, ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದಾಳೆ. ಪೊಲೀಸರು ಬಂಧಿಸಲು ಹೋಗಿದ್ದಾಗ ಆಕ್ಷೇಪ ವ್ಯಕ್ತಪಡಿಸಿದ್ದ ಚೈತ್ರಾ, ಬಳಿಕ ಸಿಸಿಬಿ ಪೊಲೀಸರು ಕಚೇರಿಗೆ ಕರೆತಂದಾಗ ಅಲ್ಲಿಯೂ ಕಣ್ಣೀರು ಹಾಕಿದ್ದಾಳೆ. ನಾನೇನೂ ತಪ್ಪು ಮಾಡಿಲ್ಲ, ನಾನೊಬ್ಬಳೇ ಇದರಲ್ಲಿ ಭಾಗಿಯಾಗಿಲ್ಲ, ಇನ್ನೂ ಕೆಲವರು ಭಾಗಿಯಾಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾಳೆ.
ದೇಶದಲ್ಲಿ ಹೊಸ ಆತಂಕ: ನಿಫಾ ವೈರಸ್​ಗೆ ಪಕ್ಕದ ಕೇರಳದಲ್ಲೇ ಇಬ್ಬರು ಬಲಿ!

ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 13 =
Remember me
