ಬೆಂಗಳೂರು:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂ. ಪಡೆದು ವಂಚಿಸಿದ್ದ ಆರೋಪದ ಮೇರೆಗೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು, ಮತ್ತೆ ತಮ್ಮ ವಶಕ್ಕೆ ಪಡೆದಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಕಚೇರಿಗೆ ಕರೆತಂದ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಸೇರಿದಂತೆ ಎಲ್ಲ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಚೈತ್ರಾಳನ್ನು ಪ್ರತ್ಯೇಕವಾಗಿ ಹಾಗೂ ಇನ್ನುಳಿದ ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದರು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಎಲ್ಲ ಆರೋಪಿಗಳ ಮೊಬೈಲ್​ಫೋನ್ ವಶಕ್ಕೆ ಪಡೆದಿರುವ ಪೊಲೀಸರು, ಇಂಥ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧಿಸಲಾಗಿದೆ ಎಂದು ಆರೋಪಿಗಳ ಕುಟುಂಬಸ್ಥರಿಗೆ ಸಂದೇಶವನ್ನು ಕಳುಹಿಸಿದ್ದಾರೆ. ವಿಚಾರಣೆ ಬಳಿಕ ಚೈತ್ರಾಳನ್ನು ಡೇರಿ ಸರ್ಕಲ್ ಬಳಿ ಇರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ. ನಾಳೆ ಬೆಳಗ್ಗೆ ಮತ್ತೆ ಆಕೆಯವನ್ನು ವಿಚಾರಣೆಗೆ ಕರೆ ತರಲಿದ್ದು, ಉಳಿದ ಆರೋಪಿಗಳನ್ನು ಇಂದು ಸಿಸಿಬಿ ಕಚೇರಿಯಲ್ಲೇ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಸಿಬಿ ಪೊಲೀಸರು, ನ್ಯಾಯಾಧೀಶರ ಮುಂದೆಯೂ ಕಣ್ಣೀರಿಟ್ಟ ಚೈತ್ರಾ ಕುಂದಾಪುರ ಹೇಳಿದ್ದೇನು?

ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ; ಪೊಲೀಸ್ ಕಮಿನಷರ್ ಪ್ರತಿಕ್ರಿಯೆ ಹೀಗಿತ್ತು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − thirteen =
Remember me
