ಬಾಗಲಕೋಟೆ:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳ ಕಿಯಾ ಕಾರು ಮುಧೋಳ ನಗರದಲ್ಲಿ ಪತ್ತೆಯಾಗಿದೆ.
ಕಿಯಾ ಕಾರು ಹಿಂದು ಕಾರ್ಯಕರ್ತ ಕಿರಣ್​ ಗಣಪ್ಪಗೋಳ ಎಂಬುವರ ಮನೆಯಲ್ಲಿತ್ತು. ಕಾರನ್ನು ಜಪ್ತಿ ಮಾಡಿ, ಶ್ರೀಕಾಂತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆ. 9 ರಂದು Ka-20 ME 7253 ನಂಬರಿನ ಕಾರನ್ನು ಶ್ರೀಕಾಂತ್​ ತನ್ನ ಬಳಿ ತಂದಿಟ್ಟುಕೊಂಡಿದ್ದ.
ಸೆ. 8ರಂದು ಡೀಲ್ ಪ್ರಕರಣ ದಾಖಲಾಗಿರುವುದು ಗೊತ್ತಾಗುತ್ತಿದ್ದಂತೆ ಚೈತ್ರಾ ಕುಂದಾಪುರ ಪಿಎ ಶ್ರೀಕಾಂತ್, ಕಿರಣ್​ಗೆ ಕರೆ ಮಾಡಿ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ ಅದನ್ನು, ತೆಗೆದುಕೊಂಡು ಬಂದು ನಿಮ್ಮ ಬಳಿ ಇಟ್ಟುಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್ ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಾರನ್ನು ತಂದು ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದ. ಚೈತ್ರಾಳ ಫೋನ್​ ಕಾಲ್​ ಡೀಟೇಲ್ಸ್​ ಆಧಾರದ ಮೇಲೆ ಕಿರಣ್​ ಮನೆಗೆ ಹೋದಾಗ ಕಾರು ಪತ್ತೆಯಾಗಿದೆ. ಈ ಹಿಂದೆ ಮುಧೋಳದಲ್ಲಿ ನಡೆದ ಒಂದು ಕಾರ್ಯಕ್ರಮಕ್ಕೆ ಬಂದಾಗ ಚೈತ್ರಾಗೆ ಕಿರಣ್​ ಪರಿಚಯವಾಗಿತ್ತು ಎಂದು ತಿಳಿದುಬಂದಿದೆ. ಶ್ರೀಕಾಂತ್​ ಮುಧೋಳ‌ ನಗರದಲ್ಲಿ ಡ್ರೈವಿಂಗ್ ಸ್ಕೂಲ್‌ ಹೊಂದಿದ್ದಾನೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಚೈತ್ರಾ ಕುಂದಾಪುರಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೇ ವೇಳೆ ಮತ್ತೊಬ್ಬ ಆರೋಪಿ ಉಡುಪಿ ಜಿಲ್ಲೆಯ ಪ್ರಸಾದ್ ಬೈಂದೂರುನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ರೂಬಿಕ್​ ಕ್ಯೂಬ್​ನಲ್ಲಿ ಅರಳಿತು ನರೇಂದ್ರ ಮೋದಿ ಭಾವಚಿತ್ರ; ಪ್ರಧಾನಿ ಜನ್ಮದಿನಕ್ಕೆ ಬಾಲಕನಿಂದ ವಿಶೇಷ ಶುಭಾಶಯ
ಸರ್ಚ್ ವಾರೆಂಟ್ ಪಡೆದು ಶೋಧನೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯ ಉಪ್ಪೂರು ಶ್ರೀರಾಮ ಸೊಸೈಟಿಯ ಬ್ಯಾಂಕ್ ಲಾಕರ್​ನಲ್ಲಿ ಇಟ್ಟಿದ್ದ ಆಸ್ತಿ ಪತ್ರ, ಬಂಗಾರವನ್ನು ಪತ್ತೆ ಮಾಡಿದ್ದಾರೆ. 1.8 ಕೋಟಿ ರೂ. ಮೌಲ್ಯದ ಆಸ್ತಿ ಪತ್ರ, 40 ಲಕ್ಷ ನಗದು, 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಚೈತ್ರಾ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಳು. ಅಲ್ಲದೆ ಶ್ರೀಕಾಂತ್ ಹೆಸರಲ್ಲಿ ಉಡುಪಿಯ ಹಿರಿಯಡ್ಕದಲ್ಲಿ ಎರಡು ಹಂತಸ್ತಿನ ಮನೆ ಕಟ್ಟಿಸುತ್ತಿದ್ದಳು. ಪ್ರಸಾದ್ ಬೈಂದೂರನ್ನು ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಸಿಸಿಬಿ ಪೊಲೀಸರು, ಆತನನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಮತ್ತೊಂದೆಡೆ ಚೈತ್ರಾ ಕುಂದಾಪುರ ಮತ್ತು ಪ್ರಸಾದ್ ಬೈಂದೂರು ಹಣದ ಡೀಲ್ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಮಾಜಿ ಸಚಿವರೊಬ್ಬರ ಹೆಸರು ಪ್ರಸ್ತಾಪವಾಗಿದೆ.
ಉಡುಪಿಯಲ್ಲಿ ಎರಡು ಅಂತಸ್ತಿನ ಮನೆ:ಚೈತ್ರಾ ಕುಂದಾಪುರ ಹಿರಿಯಡ್ಕದಲ್ಲಿ 20 ಸೆಂಟ್ಸ್ ಜಾಗ ಖರೀದಿಸಿ ಮನೆ ಕಟ್ಟಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಗೆಳೆಯ ಶ್ರೀಕಾಂತ್ ನಾಯಕ್ ಹೆಸರಿನಲ್ಲಿ ಸೆಂಟ್ಸ್​ಗೆ 50 ಸಾವಿರ ರೂ. ನೀಡಿ ಜಾಗ ಖರೀದಿಸಲಾಗಿದ್ದು, ಎರಡು ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದನೇ ಅಂತಸ್ತಿನ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
Sleep Precautions: ಮನುಷ್ಯ ಎಷ್ಟು ಗಂಟೆ ನಿದ್ದೆ ಮಾಡಬೇಕು ಗೊತ್ತಾ?

ರೂಬಿಕ್​ ಕ್ಯೂಬ್​ನಲ್ಲಿ ಅರಳಿತು ನರೇಂದ್ರ ಮೋದಿ ಭಾವಚಿತ್ರ; ಪ್ರಧಾನಿ ಜನ್ಮದಿನಕ್ಕೆ ಬಾಲಕನಿಂದ ವಿಶೇಷ ಶುಭಾಶಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six − two =
Remember me
