ಬೆಂಗಳೂರು:ಉದ್ಯಮಿ ಒಬ್ಬರಿಗೆ ಬೈಂದೂರು ವಿಧಾನಸಭೆಯ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಅವರನ್ನು ಪರಪ್ಪನ ಅಗ್ರಹಾರದಿಂದ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಹಾಗೂ ಆರೋಪಿ ಶ್ರೀಕಾಂತ್​ಗೆ ಎರಡು ದಿನಗಳ ಹಿಂದೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಚೈತ್ರಾ ಪರ ವಕೀಲರು ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶ ನೀಡಿ ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಧಿಕಾರಿಗಳು ಅವರನ್ನು ಬಿಡುಗಡೆ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ​ ಬಾಬು ಪೂಜಾರಿ ಎಂಬುವವರಿಗೆ ಚೈತ್ರಾ ಸೇರಿದಂತೆ ಹಲವರು ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಂಡೇಪಾಳ್ಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಪೊಲೀಸ್​ ಆಯಕ್ತ ಸೂಚನೆಯ ಮೇರೆಗೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಚೈತ್ರಾ ಸೇರಿದಂತೆ ಎಂಟು ಮಂದಿ ಅರೊಪಿಗಳನ್ನು ಬಂಧಿಸಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 − five =
Remember me
