ಬೆಂಗಳೂರು:ನಟಿ-ನಿರೂಪಕ ಮತ್ತು ಮಾಜಿ ಬಿಗ್ ಬಾಸ್ ಕನ್ನಡ 7 ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಪತಿ ಸತ್ಯ ನಾಯ್ಡು ಅವರೊಂದಿಗೆ ವಿಚ್ಛೇದನವನ್ನು ಪಡೆದಿದ್ದಾರೆ. ಈ ಕುರಿತಾಗಿ ಇನ್​ಸ್ಟಾಗ್ರಾಮ್​​ನಲ್ಲಿ ಭಾವನಾತ್ಮಕವಾಗಿ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಅಭಿಮಾನಿಗಳ ಬಳಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಈ ರೆಸ್ಟೋರೆಂಟ್​​​ನಲ್ಲಿ ತಿನ್ನಲು ಇಂದು ಬುಕ್ ಮಾಡಿದರೆ 4 ವರ್ಷ ಕಾಯಬೇಕು!
‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ.
ಇದನ್ನೂ ಓದಿ:VIDEO| ನಾಲ್ಕು ಲಕ್ಷ ರೂ. ಬೆಲೆಯ ಮಗನ ಶೂ ನೋಡಿ ಕೈ ಮುಗಿದ ತಂದೆ!
ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದಾರೆ.
A post shared by Chaitra Vasudevan (@chaitra_vasudevan_official_)
ಇದನ್ನೂ ಓದಿ:ಧಾರಾಕಾರ ಮಳೆ ನಡುವೆಯೇ ಕಾಣಿಸಿಕೊಂಡ ಹೆರಿಗೆ ನೋವು! JCB ಸಹಾಯದಿಂದ ಹೊಳೆ ದಾಟಿಸಿದ ಸ್ಥಳೀಯರು
ಚೈತ್ರಾ ಹಾಗೂ ಸತ್ಯ ಸರಳವಾಗಿ ಮದುವೆ ಆಗಿದ್ದರು. ಸಾರ್ವಜನಿಕವಾಗಿ ಇವರು ಯಾವುದೇ ವಿವಾದದ ಮೂಲಕ ಸುದ್ದಿ ಆಗಿಲ್ಲ. ಆದಾಗ್ಯೂ ಇವರು ಸೈಲೆಂಟ್ ಆಗಿ ಈ ಘೋಷಣೆ ಮಾಡಿರುವುದು ಅನೇಕರಿಗೆ ಶಾಕ್ ತಂದಿದೆ. ಚೈತ್ರಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿರುವುದು ಮಾತ್ರವಲ್ಲ ತಮ್ಮದೇ ಉದ್ಯಮ ಹೊಂದಿದ್ದಾರೆ. ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ನಡೆಸುತ್ತಿದ್ದಾರೆ.
VIDEO| ಬೆಂಗಳೂರಿನ ರಸ್ತೆಗಿಳಿದ ಚಾಲಕ ರಹಿತ ಕಾರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 1 =
Remember me
