ಚಿಕ್ಕೋಡಿ:ಹಿಂದೂ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು ಹಾಕಿದ್ದಾರೆ. ಬೆಳಗಾವಿಯ ಯಮಕನಮರಡಿಯಲ್ಲಿ ನಡೆಯುತ್ತಿರುವ ‘ನಾನು ಹಿಂದೂ’ ಕಾರ್ಯಕ್ರಮದಲ್ಲಿ ಅವರು ಈ ಸವಾಲೆಸೆದಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಸ್ವ-ಕ್ಷೇತ್ರವಾದ ಯಮಕನಮರಡಿಯಲ್ಲಿ ನಾನು ಹಿಂದೂ ಸಮಾವೇಶ ನಡೆಯುತ್ತಿದ್ದು, ಅಭಿನವ ಮಂಜುನಾಥ ಮಹಾಸ್ವಾಮಿ ಹಾಗೂ ಹಾಲಮಹಾಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದಾರೆ. ಸಚಿವೆ ಶಶಿಕಲಾ‌ ಜೊಲ್ಲೆ, ಸಂಸದ ಅಣ್ಣಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್ ಪಾಟೀಲ್, ಮಾಜಿ ಸಚಿವ ಶಶಿಕಾಂತ ನಾಯಿಕ, ಮಾರುತಿ ಅಷ್ಟಗಿ, ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಾರಕಿಹೊಳಿಗೆ ಸೂಲಿಬೆಲೆ ಸವಾಲು ಹಾಕಿದ್ದಾರೆ.
ನಿಪ್ಪಾಣಿಯಲ್ಲಿ ಸತೀಶ್ ಜಾರಕಿಹೊಳಿ ಹಿಂದೂ ಪದವೇ ಹೊಲಸು ಎಂದು ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಯಮಕನಮರಡಿಯಲ್ಲಿ ನಾನು ಹಿಂದೂ ಕಾರ್ಯಕ್ರಮ ಆಯೋಜಿಸಲಾಗಿದೆ. ನನ್ನ ತಾಯಿ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ನಾನು ಸುಮ್ಮನೆ ಬಿಡುವುದಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡುವುದಕ್ಕೆ ನಾನು ಬಹಿರಂಗ ಚರ್ಚೆಗೆ ಸವಾಲು ಹಾಕುತ್ತೇನೆ ಬನ್ನಿ ಎಂದು ಜಾರಕಿಹೊಳಿ ವಿರುದ್ಧ ಸೂಲಿಬೆಲೆ ತೊಡೆ ತಟ್ಟಿದ್ದಾರೆ.

ಒಂದೂವರೆ ವರ್ಷದ ಮಗನನ್ನೇ ಮಾರಿದ ತಾಯಿ; ನಾಲ್ಕೂವರೆ ವರ್ಷ ಹುಡುಕಾಡಿ ಪುತ್ರನನ್ನು ಪತ್ತೆ ಮಾಡಿ ಪಡೆದ ತಂದೆ!

75ನೇ ವಯಸ್ಸಲ್ಲಿ ಮತ್ತೆ ಮದುವೆಯಾದ ಮಾಜಿ ಮೇಯರ್; ಪತ್ನಿ ತೀರಿದ 3 ತಿಂಗಳಲ್ಲಿ ಆಕೆಯ ಅಕ್ಕನೊಂದಿಗೆ ವಿವಾಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 4 =
Remember me
