ಬೆಂಗಳೂರು:ಯಾರ್ಯಾರಿಗೆ ಯಾವ ಹೆಸರು ಸೂಕ್ತವೋ ಅದೇ ಹೆಸರಿಟ್ಟುಕೊಳ್ಳುವುದೇ ಸರಿ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯ ಎಸ್​ಸಿ ಮೋರ್ಚಾ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅಲ್ಲ, ಸಿಡಿ ಯಾತ್ರೆ ಎಂದು ಹೆಸರಿಟ್ಟುಕೊಳ್ಳಲಿ ಎಂಬ ಎಚ್​ಡಿಕೆ ಹೇಳಿಕೆಗೆ ಪ್ರತ್ಯುತ್ತರಿಸಿ, ಬಹುಶಃ ಆ ಹೆಸರು ಅವರಿಗೆ ಸೂಕ್ತ ಎನಿಸಿರಬಹುದು. ಆ ಹೇಳಿಕೆ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲು ಬಯಸುವುದಿಲ್ಲ ಎಂದರು.
ಜೆಡಿಎಸ್​​ನಲ್ಲಿ ಸಿ.ಎಂ.ಇಬ್ರಾಹಿಂ ನಾಮ್ ಕೇವಾಸ್ತೆ ಅಧ್ಯಕ್ಷರಾಗಿದ್ದು, ಮೊದಲಿಗೆ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿ. ಈ ಹಿಂದೆ ದಲಿತ ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷರಾಗಿದ್ದರು. ಆದರೆ ಇದೇ ಕುಮಾರಸ್ವಾಮಿ ಎಲ್ಲ ನಿರ್ಣಯ ತೆಗೆದುಕೊಳ್ಳುತ್ತಿದ್ದರು. ಹಾಸನದಲ್ಲಿ ಹೊತ್ತುಕೊಂಡಿರುವ ಬೆಂಕಿ ಆರಿಸಿಕೊಂಡು ಬೇರೆಯವರ ಬಗ್ಗೆ ಮಾತನಾಡಲಿ ಎಂದು ತಿವಿದರು.
ಪಂಚರತ್ನ ಯಾತ್ರೆಯಲ್ಲ, ನವಗ್ರಹ ಯಾತ್ರೆ ಎಂದು ಹೆಸರು ಬದಲಾಯಿಸಿಕೊಳ್ಳಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದರಲ್ಲಿ ತಪ್ಪೇನಿದೆ. ಒಂದು ಕುಟುಂಬದವರೇ ಜೆಡಿಎಸ್​ನಲ್ಲಿ ರಾಜಕಾರಣ ಮಾಡುತ್ತಿದ್ದಾರಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಸಮರ್ಥಿಸಿಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
