ವಿಜಯಪುರ:ಸಂವಿಧಾನ ತಿದ್ದುಪಡಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಸಿಡಿದೆದ್ದ ವಿಧಾನ ಪರಿಷತ್​ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಯಾವುದೇ ಕಾರಣಕ್ಕೂ ಅನಂತಕುಮಾರ ಹೆಗಡೆಗೆ ಟಿಕೆಟ್ ಕೊಡಬಾರದು. ಈ ಬಾರಿ ಟಿಕೆಟ್ ಕೊಡಬಾರದೆಂದು ಹೈಕಮಾಂಡ್‌ಗೆ ಒತ್ತಾಯಿಸುವುದಾಗಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಇದನ್ನೂ ಓದಿ:ಲೋಕಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತದಲ್ಲಿ ಮತದಾನ, ಏಪ್ರಿಲ್​ 19 ರಂದು ಆರಂಭ, ಜೂನ್​ 4ಕ್ಕೆ ಫಲಿತಾಂಶ
“ಸಂವಿಧಾನ ಬದಲಾವಣೆ ಹಾಗೂ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುತ್ತಿರುವ ಹೆಗಡೆ ಅವರ ನಡೆಯನ್ನು ಸಮರ್ಥಿಸಿಕೊಳ್ಳಲು ಆಗಲ್ಲ. ಈಗಾಗಲೇ ಅವರ ನಡೆಯನ್ನು ಖಂಡಿಸಿದ್ದೇನೆ. ಅಲ್ಲದೇ, ಅವರಿಗೆ ಈ ಬಾರಿ ಟಿಕೆಟ್ ಕೊಡಬಾರದೆಂದು ಮನವಿ ಕೂಡ ಮಾಡಿಕೊಳ್ಳುವುದಾಗಿ ತಿಳಿಸಿದರು. ಸಂವಿಧಾನ ತಿದ್ದುಪಡಿ ಮಾಡಲು 400ಕ್ಕೂ ಅಧಿಕ ಸ್ಥಾನ ಬೇಕೆಂದು ಅನಂತಕುಮಾರ ಹೆಗಡೆ ಹೇಳುತ್ತಾರೆ. ಸದ್ಯ ಇರುವ ಸ್ಥಾನಗಳೇ ತಿದ್ದುಪಡಿ ಮಾಡಲು ಸಾಕು. ಸಂವಿಧಾನ ಈಗಾಗಲೇ ಸಾಕಷ್ಟು ಬಾರಿ ತಿದ್ದುಪಡಿಯಾಗಿದೆ” ಎಂದರು.
“ಕಾಂಗ್ರೆಸ್ 95ಕ್ಕೂ ಅಧಿಕ ಬಾರಿ ಸಂವಿಧಾನ ತಿದ್ದುಪಡಿ ಮಾಡಿದೆ. ಆಗೆಲ್ಲ ಕಾಂಗ್ರೆಸ್‌ನವರು ಏಕೆ ಸುಮ್ಮನಿದ್ದರು? ರಾಜೀವ್ ಗಾಂಧಿ ಅವರೇ ಸಂವಿಧಾನ ತಿದ್ದುಪಡಿ ಅನಿವಾರ್ಯ ಎಂದಿದ್ದರು. ಅದು ನಿಜ ಸಹ. ಕೆಲವು ತಿದ್ದುಪಡಿ ಮಾಡಲು ಅಭ್ಯಂತರವಿಲ್ಲ. ಆದರೆ, ಯಾರೇ ಆಗಲಿ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದರೆ ಸಹಿಸಲ್ಲ. ಅದನ್ನು ಖಂಡಿತವಾಗಿ ವಿರೋಧಿಸುವೆ” ಎಂದರು.
ಬಿಸಿಯೂಟ ತುಂಬ ಅಗತ್ಯ, ದಯವಿಟ್ಟು ಅರ್ಧದಿನ ರಜೆ ಕೊಡ್ಬೇಡಿ: ಮನಕಲಕುವಂತಿದೆ ಈ ವಿದ್ಯಾರ್ಥಿ ಬರೆದ ಪತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
