ಬೆಂಗಳೂರು:ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲದಂತಾಗಿದೆ. ಈ ಕೂಡಲೇ ತಪ್ಪಿತಸ್ಥರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು‌ ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಕಾರಟಗಿ ತಾಲೂಕಿನ ಸೋಮನಾಳ ಗ್ರಾಮಕ್ಕೆ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಭೇಟಿ ನೀಡಿ ಮೃತ ಪಿಎಸ್ಐ ಪರಶುರಾಮ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್ ಐ) ಪರಶುರಾಮ್ ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ ಲಿಖಿತ ದೂರು ಕೊಟ್ಟಿದ್ದಾರೆ ಎಂದು ತಿಳಿಸಿದರು.
ಇದೇವೇಳೆ ಅವರು ತಮ್ಮ ಒಂದು ತಿಂಗಳ ವೇತನ 60 ಸಾವಿರ ರೂ. ಹಣವನ್ನು ಮೃತ ಸಬ್ ಇನ್‌ಸ್ಪೆಕ್ಟರ್ ಪರಶುರಾಮರ ಕುಟುಂಬಕ್ಕೆ ಹಸ್ತಾಂತರಿಸಿದರು. ಮಾಜಿ ಶಾಸಕರಾದ ಬಸವರಾಜ್ ಧಡೇಸುಗೂರು, ಪರಣ್ಣ ಮನವಳ್ಳಿ ಅವರು ಈ ವೇಳೆ ಉಪಸ್ಥಿತರಿದ್ದರು.
ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಶೀಘ್ರದಲ್ಲೇ ತರಗತಿಗಳ ಆರಂಭ: ಸಚಿವ ಶಿವನ್​ಕುಟ್ಟಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 − one =
Remember me
