ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಹೈ ವೋಲ್ಟೇಜ್​​ ಕ್ಷೇತ್ರವಾಗಿತ್ತು. ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದರು. ಅವರ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಸ್ಪರ್ಧಿಸಿದ್ದರು.
ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲಿನಿಂದಲೂ ಮಂಡ್ಯ ಜೆಡಿಎಸ್ ಭದ್ರಕೋಟೆ ಆಗಿದೆ.
ಆದರೆ ಕಳೆದ ಚುನಾವಣೆಯಲ್ಲಿ ಆ ಮಾತು ಸುಳ್ಳಾಗಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಗಿ ನಿಖಿಲ್ ಸೋತಿದ್ದರು. ಈ ಬಾರಿ ಕುಮಾರಣ್ಣ ಸುಮಾರು 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದ್ದರು. ಇದರಿಂದ ಕೊಂಚಮಟ್ಟಿಗೆ ಕ್ಷೇತ್ರದಲ್ಲಿ ಕದನ ಕುತೂಹಲ ಮೂಡಿತ್ತು. ದರ್ಶನ್ ಹೋದ ಕಡೆಯೆಲ್ಲಾ ಜನಸಾಗರ ನೆರೆದಿತ್ತು. ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ದರ್ಶನ್ ಹಾಗೂ ಯಶ್ ಪ್ರಚಾರ ನಡೆಸಿದ್ದರು. ಸುಮಲತಾ ಸಂಸದೆಯಾಗಿ ಗೆದ್ದಿದ್ದರು. ನಿಖಿಲ್ ಕುಮಾರಸ್ವಾಮಿ ಎದುರು ಭರ್ಜರಿ ಗೆಲುವು ಸಾಧಿಸಿದ್ದರು.
ಆದ್ರೆ ಈ ಬಾರಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್‌ಡಿಕೆ ಸ್ಪರ್ಧಿಸಿದ್ದರು. ಬಿಜೆಪಿಗೆ ಬೆಂಬಲ ಸೂಚಿಸಿರುವ ಸುಮಲತಾ ಅಂಬರೀಶ್, ಕುಮಾರಸ್ವಾಮಿ ಪರ ನಿಲ್ಲುವಂತಾಯಿತು. ಹಾಗಾಗಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಿದ್ದು ಅಚ್ಚರಿ ಮೂಡಿಸಿತ್ತು. ಬಳಿಕ ದರ್ಶನ್ ನನ್ನ ಪ್ರಚಾರ ಪಕ್ಷದ ಪರ ಅಲ್ಲ, ಅಭ್ಯರ್ಥಿಗಳ ಪರ ಎಂದಿದ್ದರು. ಸುಮಲತಾ ಕೂಡ ಅದು ದರ್ಶನ್ ಇಷ್ಟ ನಾನು ಏನು ಹೇಳಲು ಸಾಧ್ಯವಿಲ್ಲ ಎಂದಿದ್ದರು.ಮಾಜಿ ಸಿಎಂ ಕುಮಾರಸ್ವಾಮಿ ಒಟ್ಟು 851881 ಮತಗಳನ್ನು ಗಳಿಸಿ, 284620 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಸದ್ಯ ಕುಮಾರಸ್ವಾಮಿಯವರ ಗೆಲುವನ್ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಜತೆಗೆ ದರ್ಶನ್ ಪ್ರಚಾರ ‘ಕೈ’ ಹಿಡಿಯಲಿಲ್ಲ; ಕಳೆದ ಬಾರಿ ಸುಮಲತಾ ಸಂಸದೆಯಾಗಿ ಗೆದ್ದಿದ್ರು, ಆದ್ರೆ ಕುಮಾರಣ್ಣನ್ನ ಸೋಲಿಸೋದು ಸುಲಭದ ಮಾತಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:three + twelve =
Remember me
