ಚಾಮರಾಜನಗರ:ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಆಕ್ರೋಶ ವ್ಯಕ್ತವಾಯಿತು.
ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಶುರುವಾಗಲು ಕ್ಷಣಗಣನೆ ಆರಂಭವಾಗಿದೆ. ಸಿಎಂ ಆಗಮನದ ನಿರೀಕ್ಷೆಯಲ್ಲಿರುವ ಎಲ್ಲರೂ ಇದ್ದಾರೆ. ಈ ಮಧ್ಯೆ ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಅಭಿಮಾನಿಗಳು ವೇದಿಕೆಯಲ್ಲಿ ಯಡಿಯೂರಪ್ಪ ಫೋಟೊ ಹಾಕಿಲ್ಲ ಎಂದು ಜೋರಾಗಿ ಕೂಗಾಡಿದರು.
ಬಿಎಸ್​ವೈ ಮತ್ತು ನಿರಂಜನ್ ಭಾವಚಿತ್ರ ಇರುವ ಫೋಟೋ ತೋರಿಸಿ ಯಡಿಯೂರಪ್ಪ ಭಾವಚಿತ್ರ ಯಾಕೆ ಹಾಕಿಲ್ಲ? ಅಂತ ಪ್ರಶ್ನಿಸಿದರು. ಬಿಜೆಪಿ ಮುಖಂಡರು ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರೂ ಸಫಲರಾಗಲಿಲ್ಲ. ಬಳಿಕ ವೇದಿಕೆ ಹತ್ತಿದ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಇದು ಸರ್ಕಾರಿ ಕಾರ್ಯಕ್ರಮ. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮ ನಡೆಯುತ್ತಿದೆ. ಇದು ಬಿಜೆಪಿ ಪಕ್ಷದ ಕಾರ್ಯಕ್ರಮವಲ್ಲ ಎಂದು ತಿಳಿಸಿದ ಬಳಿಕ ಕಾರ್ಯಕರ್ತರು ಸಮಾಧಾನಗೊಂಡರು.
ವಿಧಿಯೇ ನೀನೆಷ್ಟು ಕ್ರೂರಿ? ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮೂವರು ಕೂಲಿ ಕಾರ್ಮಿಕರು ದುರ್ಮರಣ! ಆನೇಕಲ್​ನಲ್ಲಿ ಭೀಕರ ಘಟನೆ

ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
