ಚಾಮರಾಜನಗರ:ತಂದೆ ಹಾಗೂ ಮಲತಾಯಿ ಸೇರಿಕೊಂಡು ಐದು ವರ್ಷದ ಹೆಣ್ಣು ಮಗುವನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯಲ್ಲಿ ನಡೆದಿದೆ.
ಎರಡನೇ ಹೆಂಡತಿಗೆ ಮಕ್ಕಳಾಗಲಿಲ್ಲ ಎಂಬ ಹೊಟ್ಟೆ ಕಿಚ್ಚಿಗೆ ಬಾಲಕಿಯನ್ನು ಕೊಂದು ಶವವನ್ನು ಆರೋಪಿಗಳು ದೇವರ ಕೋಣೆಯಲ್ಲಿಟ್ಟಿದ್ದರು. ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಮಹೇಶ್​ ಹಾಗೂ ರತ್ನಮ್ಮ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾದ ದುಃಖದಲ್ಲೇ ಆತ್ಮಹತ್ಯೆಗೆ ಶರಣಾದ ತಂದೆ
ಮಹೇಶ್ ಹಾಗೂ ಗೌರಮ್ಮ ದಂಪತಿಗೆ ಹೆಣ್ಣು ಮಗುವಿತ್ತು. ಇದರ ನಡುವೆ ಗೌರಮ್ಮ ಗಂಡನನ್ನು ಬಿಟ್ಟು ಬೇರೆ ಮದುವೆಯಾಗಿದ್ದಳು. ನಂತರ ಮಹೇಶನೂ ರತ್ಮಮ್ಮ ಎಂಬಾಕೆಯನ್ನು ಮದುವೆಯಾಗಿದ್ದ. ಆದರೆ, ಇವರಿಗೆ ಮಕ್ಕಳಾಗಿರಲಿಲ್ಲ. ಒಮ್ಮೆ ಮೊದಲ ಹೆಂಡತಿ ತನ್ನ ಮಗಳೊಂದಿಗೆ ಪಕ್ಕದ ಮನೆಯ ಸಮಾರಂಭವೊಂದಕ್ಕೆ ಬಂದಿದ್ದಳು.
ಸಮಾರಂಭದಿಂದ ಮಗುವನ್ನು ಅಪಹರಿಸಿ, ಕೊಲೆ ಮಾಡಿ ಮಗುವಿನ ಶವವನ್ನು ಚೀಲದಲ್ಲಿ ಕಟ್ಟಿ ಮಹೇಶ್-ರತ್ನಮ್ಮ ದಂಪತಿ ದೇವರ ಕೋಣೆಯಲ್ಲಿ ಬಚ್ಚಿಟ್ಟಿದ್ದರು. ಮಗು ಪತ್ತೆಯಾಗದಿದ್ದಾಗ ಗೌರಮ್ಮ ಕಾಣೆಯಾಗಿರುವುದಾಗಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದಳು. ಕೇವಲ 12 ಗಂಟೆಯೊಳಗೆ ಗುಂಡ್ಲುಪೇಟೆ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ದೇವರ ಕೋಣೆಯಲ್ಲಿ ಬಚ್ಚಿಟ್ಟಿದ್ದ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಿರುಕುಳಕ್ಕೆ ಯುವ ವಕೀಲ ಬಲಿ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
