ಚಾಮರಾಜನಗರ:ಮಲೆಮಹದೇಶ್ವರ ಬೆಟ್ಟದ ಬಳಿ ಚಾಮರಾಜನಗರ ಬಿಇಒ ಜೀಪ್ ಪಲ್ಟಿಯಾಗಿ ಚಾಲಕನಿಗೆ ಗಾಯವಾಗಿದ್ದು, ಬೆಟ್ಟದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಪೊಲೀಸರನ್ನು ಸಿಎಂ ಕಾರ್ಯಕ್ರಮದ ಬಂದೋಬಸ್ತ್​​ಗೆ ಕರೆದೊಯ್ಯುವಾಗ ಅವಗಢ ಸಂಭವಿಸಿದೆ. ಚಾಮರಾಜನಗರ ಬಿಇಒ ಕಚೇರಿಯ ಬೊಲೆರೊ ಕಾರಿನ ಚಾಲಕ ಗುರುಕಿರಣ್​ಗೆ ಸಣ್ಣ ಪುಟ್ಟಗಾಯಗಳಾಗಿವೆ. ಉಳಿದವರಿಗೆ ತೊಂದರೆ ಆಗಿಲ್ಲ.
ತಾಳುಬೆಟ್ಟದ ಮಾರ್ಗದಲ್ಲಿರುವ ಆನೆ ತಲೆದಿಂಬದ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಗಾಯಾಳು ಗುರುಕಿರಣ್​ಗೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಇನ್ನು ಸಿಎಂ ಆದ ಬಳಿಕ ಮೊದಲ‌ ಬಾರಿಗೆ ಬಿಎಸ್​ವೈ ಮಾದಪ್ಪನ ದರ್ಶನ ಪಡೆಯುತ್ತಿದ್ದಾರೆ. ಎರಡು ದಿನಗಳ ಕಾಲ ಪ್ರವಾಸ ಕೈ ಗೊಂಡಿದ್ದು, ಇಂದು ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಆಗಮಿಸಲಿದ್ದಾರೆ. ಬಳಿಕ 5.30ಕ್ಕೆ ಅಧಿಕಾರಿಗಳೊಂದಿಗೆ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ:ಲ್ಯಾಂಡ್​ಲೈನ್​ನಿಂದ ಮೊಬೈಲ್​ಗೆ ಕರೆ: ಬದಲಾಗಿದೆ ನಿಯಮ- ಜ.1ರಿಂದ ಜಾರಿ
ಪ್ರಾಧಿಕಾರದ ಅಧ್ಯಕ್ಷರಾಗಿರುವ ಸಿಎಂ, ಇಂದು ಮಾದಪ್ಪನ ಬೆಟ್ಟದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೇರವೇರಿಸಲಿದ್ದಾರೆ.
ಸಿಎಂ ಬಿಎಸ್​ವೈಗೆ ಡಿಸಿಎಂ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಸೇರಿದಂತೆ ಸ್ಥಳೀಯ ಶಾಸಕರು ಸಾಥ್ ನೀಡಲಿದ್ದಾರೆ.
ಕಣ್ಣಿನ ಕೆಳಗಿರುವ ಕಪ್ಪು ವರ್ತುಲ: ವೈದ್ಯರು ಹೇಳಿರುವ ಪರಿಹಾರ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − six =
Remember me
