ಚಾಮರಾಜನಗರ:ಪೊಲೀಸರಿಗೆ ಹೆದರಿ ಓಡುತ್ತಿದ್ದ ಯುವಕ ಪ್ರಜ್ಞೆತಪ್ಪಿ ಬಿದ್ದು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ತಾಲೂಕು ಯಾಲಕ್ಕೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಇದನ್ನೂ ಓದಿ:ಹಗಲಿನಲ್ಲೇ ಕಚೇರಿ ಬಳಿ ಪತ್ನಿಗೆ ಚಾಕು ಇರಿದಿದ್ದ ಭಾರತೀಯನಿಗೆ ದುಬೈನಲ್ಲಿ ಸಿಕ್ಕ ಶಿಕ್ಷೆ ಎಂಥದ್ದು ಗೊತ್ತಾ?
ಶಂಕರ್ (22) ಮೃತ ಯುವಕ. ಕೋವಿಡ್-19 ಹಿನ್ನೆಲೆಯಲ್ಲಿ ಗುಂಪುಗೂಡದಂತೆ ನಿಷೇದಾಜ್ಞೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಗಸ್ತು ತಿರುಗಲು ಕುದೇರು ಠಾಣೆ ಪೊಲೀಸರು ಹೋಗಿದ್ದರು. ಈ ವೇಳೆ ಯಾಲಕ್ಕೂರು ಗ್ರಾಮದ ಪಡಸಾಲೆಯೊಂದರಲ್ಲಿ ಯುವಕರ ಗುಂಪು ಕುಳಿತಿದ್ದರು. ಪೊಲೀಸ್ ಜೀಪ್ ಕಂಡೊಡನೆ ದಿಕ್ಕಾಪಾಲಾಗಿ ಯುವಕರು ಓಡಿದ್ದಾರೆ.
ಓಡುತ್ತಾ ಜಮೀನೊಂದರಲ್ಲಿ ಎಡವಿ ಬಿದ್ದು ಶಂಕರ್​ ಪ್ರಜ್ಞೆ ಕಳೆದುಕೊಂಡಿದ್ದ. ಚಿಕಿತ್ಸೆಗೆಂದು ಸಂತೇಮರಹಳ್ಳಿ ಪ್ರಾ.ಆ.ಕೇಂದ್ರಕ್ಕೆ ಗ್ರಾಮಸ್ಥರು ಕರೆದೊಯ್ದರು. ಬಳಿಕ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದರು. ಅದರಂತೆ ಶಂಕರನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.
ಇದನ್ನೂ ಓದಿ:ಮಗಳಿಗೆ ಕರೊನಾ ಎಂದು ರೀಲುಬಿಟ್ಟ ವಧುವಿನ ಅಪ್ಪ- ಮದುವೆ ರದ್ದು!
ಆದರೆ, ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ಜಿಲ್ಲಾಸ್ಪತ್ರೆ ವೈದ್ಯರು ಇದೇ ವೇಳೆ ತಿಳಿಸಿದ್ದಾರೆ. ಆ್ಯಂಬುಲೆನ್ಸ್ ಮೂಲಕ ಯುವಕನ ಶವವನ್ನು ಗ್ರಾಮಕ್ಕೆ ತರಲಾಗಿದೆ. ಇತ್ತ ವಿಷಯ ತಿಳಿದಿದ್ದರು ಏನೂ ಆಗಿಲ್ಲವೆಂಬಂತೆ ವರ್ತಿಸುತ್ತಿರುವ ಕುದೇರು ಠಾಣಾ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
VIDEO| ನನ್ನ ಮಲಗು ಬಾ ಅಂತೀಯಾ…ರಾಜಕೀಯ ಮುಖಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 13 =
Remember me
