ಚಾಮರಾಜನಗರ: ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದವರ ಪೈಕಿ 22 ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಏ.6ರಂದು ಪರೀಕ್ಷೆಗಾಗಿ ಕಳುಹಿಸಲಾಗಿದ್ದ ವರದಿ ಬಂದಿದ್ದು, 21 ಜನರ ವರದಿಯು ನೆಗೆಟಿವ್ ಆಗಿದೆ. ಉಳಿದ ಒಬ್ಬರ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ
ತಬ್ಲಿಘಿ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ 85 ಜನರಲ್ಲಿ 23 ಜನರನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರ ಹಾಗೂ 62 ಜನರನ್ನು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತ್ತಿದೆ. ಇವರಲ್ಲಿ 62 ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೊರೊನಾ ಪಾಸಿಟಿವ್ ವ್ಯಕ್ತಿಯು ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ 52 ವ್ಯಕ್ತಿಗಳನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ನಿಗಾವಣೆ ಮಾಡಲಾಗುತಿದ್ದು ಇವರಲ್ಲಿ 48 ಜನರು 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ.
ವಿದೇಶಗಳಿಂದ ಪ್ರಯಾಣಿಸಿ ಚಾಮರಾಜನಗರ ಜಿಲ್ಲೆಗೆ ಇದುವರೆಗೆ ಒಟ್ಟು 43 ಜನರು ಬಂದಿದ್ದು ಇವರೆಲ್ಲರೂ ಸಹ 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.vijayavani.net/kerala-woman-in-israel-who-tested-positive-for-covid-19-shares-her-near-death-experience/

ಭರ್ಜರಿ ಹನಿಮೂನ್​!- ಐಷಾರಾಮಿ ರೆಸಾರ್ಟ್​ನಲ್ಲಿ ಇರೋದು ಇದೊಂದೇ ಜೋಡಿ- 6 ದಿನಕ್ಕೆ ಬಂದವರೀಗ 26 ದಿನ ಇರುವಂತಾಗಿದೆ ನೋಡಿ..

ಭರ್ಜರಿ ಹನಿಮೂನ್​!- ಐಷಾರಾಮಿ ರೆಸಾರ್ಟ್​ನಲ್ಲಿ ಇರೋದು ಇದೊಂದೇ ಜೋಡಿ- 6 ದಿನಕ್ಕೆ ಬಂದವರೀಗ 26 ದಿನ ಇರುವಂತಾಗಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
