ಚಾಮರಾಜನಗರ: ದುಷ್ಕರ್ಮಿಗಳ ತಂಡ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಚಾಮರಾಜನಗರದ ಕೆ.ಸಿ.ಮೊಹಲ್ಲಾದ ರಾಜಿಕ್​ ಅಹಮದ್​ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದೆ. ರಾಜಿಕ್​ ಅಹಮದ್​ ಅವರ ತೊಡಗೆ ಗುಂಡು ಹೊಕ್ಕಿವೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ.
ಫಾರೂಕ್, ತೌಷಿರ್ ಹಾಗೂ ಶಾಜನ್ ಎಂಬುವವರು ಗುಂಡು ಹಾರಿಸಿ ತಲೆ ಮರಸಿಕೊಂಡಿದ್ದಾರೆ.ಫಾರೂಕ್​ ಹಾಗೂ ರಾಜಿಕ್​ ಹಲವು ವರ್ಷಗಳಿಂದ ಕಬ್ಬಿಣದ ವ್ಯವಹಾರವನ್ನು ಪಾಲುದಾರಿಕೆಯಲ್ಲಿ ನಡೆಸುತ್ತಿದ್ದರು.
ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಪ್ರತ್ಯೇಕವಾಗಿ ವ್ಯವಹಾರ ನಡೆಸುತ್ತಿದ್ದರು. ಇತ್ತೀಚೆಗೆ ರಾಜಿಕ್​ ಕಡಿಮೆ ಬೆಲೆಗೆ ಕಬ್ಬಿಣ ಮಾರಾಟ ಮಾಡುತ್ತಿದ್ದರು. ಇದರಿಂದ ಫಾರೂಕ್​ಗೆ ನಷ್ಟ ಉಂಟಾಗಿತ್ತು. ಕಡಿಮೆ ಬೆಲೆಗೆ ಮಾರಾಟ ಮಾಡದಂತೆ ಅವರು ಎಚ್ಚರಿಸಿದ್ದರು. ಹೀಗಿದ್ದರೂ ರಾಜಿಕ್​ ಕಡಿಮೆ ಬೆಲೆಗೆ ಕಬ್ಬಿಣ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಮರಾಜನಗರ ಟೌನ್ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಔಷಧ ಕೊಂಡೊಯ್ಯಲು ಅವಕಾಶ ಕಲ್ಪಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 − 1 =
Remember me
