ಮೈಸೂರು:ಸರ್ಕಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ:ಮುಡಾ ಹಗರಣದಲ್ಲಿ ಮೊದಲ ತಲೆದಂಡ: ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅಮಾನತು
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ರಾಜಮಾತೆ ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು ಸಭೆ ನಡೆಸುವುದು ಕಾನೂನುಬಾಹಿರ ಎಂದು ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ, ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು,ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.
ಕ್ಯಾಬಿನೇಟ್​ನಲ್ಲಿ ಚರ್ಚಿಸಿ ಕ್ರಮ:ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.  ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಸಂಸದ ಡಾ.ಕೆ. ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು.
ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು . ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.
ತಪ್ಪು ಮಾಡಿದವರ ಮೇಲೆ ಕ್ರಮ:ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಬದಲಿ ನಿವೇಶನ ಅನ್ವಯ ಆಗುವುದಿಲ್ಲ. ಈ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.
ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ. ವಿರೋಧ ಪಕ್ಷದವರಿಗೆ ಸುಳ್ಳು ಹೇಳಿರುವುದು ರುಜುವಾತಾಗದೆ ಹೋದರೆ ಕಷ್ಟವಾಗುತ್ತದೆ ಎಂದು ಯೋಚಿಸುತ್ತಿದ್ದಾರೆ. ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ ಎಂದರು.
ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡ್ತಾರೆ:ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಗಳಾಗಿರುತ್ತಾರೆ. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಮುಖ್ಯಮಂತ್ರಿಯನ್ನು ಶಾಸಕರು,ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.
ಆಜಾನ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eight =
Remember me
