ಬಾಗಲಕೋಟೆ:ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಸದಸ್ಯೆಯರ ನೂಕಾಟದಲ್ಲಿ ಕೆಳಗೆ ಬಿದ್ದಿದ್ದ ಗರ್ಭಿಣಿ ಸದಸ್ಯೆ ಚಾಂದಿನಿ ನಾಯಕ್ ಅವರಿಗೆ ಮಹಲಿಂಗಪುರ ಸರಕಾರಿ ಆಸ್ಪತ್ರೆಯಲ್ಲಿ ಗರ್ಭಪಾತವಾಗಿದೆ.
ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ನ.9ರಂದು ಚುನಾವಣೆ ನಡೆದಿತ್ತು. ಈ ವೇಳೆ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಕಾರ್ಯಕರ್ತರು ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕಾರ್ಯಕರ್ತರ ತಳ್ಳಾಟದಿಂದ ಸದಸ್ಯೆ ಚಾಂದಿನಿ ನಾಯಕ್ ಕೆಳಕ್ಕೆ ಬಿದ್ದಿದ್ದರು. ಇದರಿಂದ ಹೊಟ್ಟೆಗೆ ಏಟು ಬಿದ್ದು, ಮಗುವಿನ ಬೆಳವಣಿಗೆಗೆ ಹೊಡೆತ‌ ಬಿದ್ದಿತ್ತು. ಇದೀಗ ಸರಕಾರಿ ಆಸ್ಪತ್ರೆಯಲ್ಲಿ ಗರ್ಭಪಾತವಾಗಿದೆ.
ಇದನ್ನೂ ಓದಿ:ಸಿಎಂ ರಾಜಕೀಯ ಕಾರ್ಯದರ್ಶಿ ಡಿಸ್​ಚಾರ್ಜ್​- ಆತ್ಮಹತ್ಯೆಗೆ ಯತ್ನಿಸಿದ್ದು ಹೌದಾ? ಏನೆಂದ್ರು ಕೇಳಿ…
ಚಾಂದಿನಿ ನಾಯಕ್ ಬಿಜೆಪಿ ಸದಸ್ಯೆ‌ಯಾಗಿದ್ದು, ಕಾಂಗ್ರೆಸ್​ಗೆ ಬೆಂಬಲ ನೀಡೋಕೆ ಮುಂದಾಗಿದ್ದರು. ಈ ವೇಳೆ ಅವರನ್ನು ಗೈರಾಗಿಸಲು ಸಿದ್ದು ಸವದಿ ಪುರಸಭೆಯಿಂದ ಹೊರ ಕಳುಹಿಸಲು ಯತ್ನಿಸಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಏರ್ಪಟ್ಟು ಸದಸ್ಯೆಯರಾದ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ, ಗೋದಾವರಿ ಬಾಟ್​ರನ್ನು ಎಳೆದಾಡಿದ್ದರು. ಆ ವೇಳೆ ಚಾಂದಿನಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು.(ದಿಗ್ವಿಜಯ ನ್ಯೂಸ್​)
ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟ: ಎರಡು ಹಂತಗಳಲ್ಲಿ ಮತದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
