ಶಿವಮೊಗ್ಗ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೆಲವು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದ್ದು, ಅಲ್ಲಲ್ಲಿ ಈ ಕುರಿತ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಶಿಕಾರಿಪುರದಲ್ಲಿ ಮಾತನಾಡಿರುವ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಆಗಮಿಸುತ್ತಿರುವ ಅಮಿತ್ ಷಾ ಅವರನ್ನು ಇಂದು ಸಂಜೆ ಭೇಟಿ ಮಾಡಲಿದ್ದೇನೆ ಎಂದ ಅವರು, ಇನ್ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ರಾಜ್ಯದ ಬಗ್ಗೆ ಹೆಚ್ಚು ಗಮನ ಕೊಡಲಿದ್ದಾರೆ ಎಂಬುದಾಗಿ ಹೇಳಿದರು.
ರಾಜ್ಯದಲ್ಲಿ ನಾವು 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಈ ಗುರಿ ತಲುಪಲು ಬೇಕಾದ ಸಲಹೆಯನ್ನು ಅಮಿತ್ ಷಾ ನೀಡಲಿದ್ದಾರೆ. ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದ ಬಿಎಸ್​ವೈ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆ ಕುರಿತಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಆ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು. ಆದರೆ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಬಿಡುವುದು ಕೇಂದ್ರ ನಾಯಕರಿಗೆ ಬಿಟ್ಟಿದ್ದು ಎಂದ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂಬುದನ್ನು ತಿಳಿಸಿದರು.
ನಡೆದೇ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಹೊರಟ ಸಾಹಸಿ: 152 ದಿನಗಳಲ್ಲಿ 6,017 ಕಿ.ಮೀ. ನಡಿಗೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
