ದಾವಣಗೆರೆ:ಲಂಚ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಅವರ ಬಂಧನವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ಚನ್ನಗಿರಿ ಕ್ಷೇತ್ರದ ಗೋಪನಾಳ್ ಗ್ರಾಮದಲ್ಲಿ ಪಟಾಕಿ ಸಿಡಿಸಿ ಕೈ ಕಾರ್ಯಕರ್ತರು ಖುಷಿ ಪಟ್ಟಿದ್ದಾರೆ. ಚನ್ನಗಿರಿ ಕ್ಷೇತ್ರದ ಶಾಸಕ‌ ವಿರೂಪಾಕ್ಷಪ್ಪ ಅವರು ಲಂಚದ ಪ್ರಕರಣದಲ್ಲಿ A1 ಆರೋಪಿಯಾಗಿದ್ದಾರೆ. ನಿನ್ನೆ (ಮಾ.28) ಸಂಜೆ ಮಾಡಾಳ್ ಬಂಧನವಾಗಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಈ ಹಿಂದೆ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕಾಂಗ್ರೆಸ್​ ಪ್ರತಿಭಟನೆ ಮಾಡಿತ್ತು.
ಇದನ್ನೂ ಓದಿ:ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಅನುಚಿತ ವರ್ತನೆ: ತುಮಕೂರಲ್ಲಿ ಕಾಮುಕ ಶಿಕ್ಷಕನ ಬಂಧನ
ನಿನ್ನೆ ರಾತ್ರಿ ಬೆಂಗಳೂರಿಗೆ ಬರುವ ವೇಳೆ ತುಮಕೂರಿನ ಕ್ಯಾತ್ಸಂದ್ರದ ಬಳಿಯೇ ಮಾಡಾಳ್​ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತಂದಿದ್ದಾರೆ. ಹೈಕೋರ್ಟ್​ನಿಂದ ಜಾಮೀನು ರದ್ದಾದರೆ, ಮಾಡಾಳ್ ತಪ್ಪಿಸಿಕೊಳ್ಳದಂತೆ, ನಿಗಾವಹಿಸಲು ಪ್ರತ್ಯೇಕ ಐದು ತಂಡಗಳನ್ನು ರಚನೆ ಮಾಡಲಾಗಿತ್ತು. ಎಸ್ಪಿ ಕೆ.‌ವಿ ಅಶೋಕ್ ನೇತೃತ್ವದಲ್ಲಿ 5 ವಿಶೇಷ ತಂಡಗಳನ್ನ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ರಚಿಸಿದ್ದರು.
ಲೋಕಾಯುಕ್ತ ಪೊಲೀಸರು ಶಾಸಕ ಮಾಡಳ್ ವಿರೂಪಾಕ್ಷಪ್ಪ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರು ಪಡಿಸಿ, ತಮ್ಮ ಕಸ್ಟಡಿಗೆ ಕೇಳಲಿದ್ದಾರೆ. ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನಲೆ ಮತ್ತೆ ವಶಕ್ಕೆ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಸಮಯದಲ್ಲೂ ಸರಿಯಾಗಿ ಸಹಕಾರ ನೀಡಿಲ್ಲ ಮತ್ತು ಸಮರ್ಪಕವಾದ ಉತ್ತರ ನೀಡಿಲ್ಲ. ಹಣದ ಮೂಲಕ್ಕೆ ಪೂರಕವಾದ ಸಾಕ್ಷ್ಯಾಧಾರಗಳನ್ನು ಸಹ ಒದಗಿಸಿಲ್ಲ. ಹಣದ ಮೂಲದ ಕುರಿತಂತೆ ಪುರಾವೆ ನೀಡಲು ಮೀನಮೇಷ ಎಣಿಸುತ್ತಿದ್ದಾರೆ. ಹಲವು ಬಾರಿ ವಿಚಾರಣೆ ವೇಳೆಯಲ್ಲೂ ಹಣದ ಮೂಲದ ದಾಖಲೆ ನೀಡಲು ವಿಫಲವಾಗಿದ್ದಾರೆ. ಮೊದಲಿಗೆ ಕೃಷಿ ಮೂಲದ ಹಣ ಎಂದು ಮಾಡಳ್ ವಿರೂಪಾಕ್ಷಪ್ಪ ಹೇಳಿದ್ದರು. ಆ ಬಳಿಕ ವಿಚಾರಣೆ ವೇಳೆ ಸೂಕ್ತ ದಾಖಲೆಗಳ ಒದಗಿಸಿ, ಸಮರ್ಥಿಸಲು ತಡಬಡಾಯಿಸಿದ್ದರು. ಹೀಗಾಗಿ ಕಸ್ಟಡಿಗೆ ಕೇಳಲು ಅಧಿಕಾರಿಗಳು ಮುಂದಾಗಿದ್ದಾರೆ.
ಏನಿದು ಪ್ರಕರಣ?ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಪ್ರಶಾಂತ್ ಮಾಡಾಳ್ ಬಂಧನವಾಗಿದೆ. ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಅದೇ ದಿನ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ:ಎಲ್ಲ ಹಳ್ಳಿಗೂ ತಲುಪಬೇಕು ಆತ್ಮನಿರ್ಭರ ಗ್ರಾಮ ಪಂಚಾಯಿತಿ ಪುಸ್ತಕ: ಮುಖ್ಯಮಂತ್ರಿ ಬೊಮ್ಮಾಯಿ
ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮಾರ್ಚ್​ 2ರ ಸಂಜೆ ಖಾಸಗಿ ಕಚೇರಿಯಲ್ಲಿ 2.42 ಕೋಟಿ ಮತ್ತು ಮಧ್ಯರಾತ್ರಿ ಡಾಲಸ್೯ ಕಾಲನಿಯ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ಸೇರಿ ಒಟ್ಟಾರೆ 8.42 ಕೋಟಿ ವಶಕ್ಕೆ ಪಡೆಯಲಾಗಿತ್ತು. ಲೋಕಾಯುಕ್ತ ಮರು ಸ್ಥಾಪನೆಯಾದ ಮೇಲೆ ಲೋಕಾ ಪೊಲೀಸರು ಭೇಟೆಯಾಡಿರುವ ದೊಡ್ಡ ಮೊತ್ತದ ಪ್ರಕರಣ ಇದಾಗಿದ್ದು, ಈ ಪ್ರಕರಣ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.
ಈ ಪ್ರಕರಣದ ಬಳಿಕ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ನಾಪತ್ತೆಯಾಗಿದ್ದರು. ನಂತರ ಜಾಮೀನಿಗಾಗಿ ತಮ್ಮ ಪರ ವಕೀಲರಿಂದ ಅರ್ಜಿ ಸಲ್ಲಿಸಿದ್ದರು. ಜಾಮೀನು ಮಂಜೂರಾದ ಬೆನ್ನಲ್ಲೆ ಲೋಕಾಯುಕ್ತ ಕಚೇರಿಗೆ ಹಾಜರಾಗಿದ್ದರು. ಇದೀಗ ನಿರೀಕ್ಷಣಾ ಜಾಮೀನು ತಿರಸ್ಕೃತಗೊಂಡಿದ್ದು, ವಿರೂಪಾಕ್ಷಪ್ಪ ಬಂಧನವಾಗಿದೆ.(ಏಜೆನ್ಸೀಸ್​)
ಬಂಧನದ ಬೆನ್ನಿಗೇ ಮಾಡಾಳ್​ಗೆ ಎದೆನೋವು!; ‘ನಾನು ಹಾರ್ಟ್ ಪೇಷಂಟ್, ಎದೆನೋವು ಬರ್ತಿದೆ’ ಎನ್ನುತ್ತಿರುವ ಶಾಸಕ

ಲೋಕಾಯುಕ್ತ ಪೊಲೀಸರ ಭರ್ಜರಿ ಬೇಟೆ: ಪ್ರಶಾಂತ್​ ಮಾಡಾಳ್​ ಮನೆಯಲ್ಲಿ 6 ಕೋಟಿ ರೂ. ನಗದು ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 15 =
Remember me
