ಬೆಂಗಳೂರು:ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ಥಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ ಎಂದರು.ಈಕೆಯ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಮತ್ತು ಜಯಂತ್ಸೋವವನ್ನು ಆರಂಭಿಸಿದೆ ಎಂದು ವಿವರಿಸಿದರು.ಲೋಕೋಪಯೋಗಿ ಸಚಿವ ಸತೀಶ್ ಜಾರಕಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ್, ಧಾರವಾಡ ಗ್ರಾಮೀಣ ಶಾಸಕರಾದ ವಿನಯ್ ಕುಲಕರ್ಣಿ, ಬೈಲಹೊಂಗಲ ಶಾಸಕರಾದ ಮಹಂತೇಶ ಕೌಜಲಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × three =
Remember me
