ಬೆಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ದತ್ತಿ ನಿಧಿಯನ್ನು ಸ್ಥಾಪನೆ ಮಾಡಿದೆ. ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು 1.5 ಲಕ್ಷ ರೂ. ಚೆಕ್ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಮತ್ತು ಕಾರ್ಯದರ್ಶಿ ರೂಪ ಅವರಿಗೆ ಹಸ್ತಾಂತರಿಸುವ ಮೂಲಕ ದತ್ತಿ ನಿಧಿಯನ್ನು ಸ್ಥಾಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಾನಂದ ತಗಡೂರು, ಎಂಬತ್ತರ ದಶಕದಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದಾಗ ಕೆಯುಡಬ್ಲ್ಯುಜೆ ಹೋರಾಟದ ಫಲವಾಗಿ ಪತ್ರಿಕಾ ಅಕಾಡೆಮಿ ಅಸ್ತಿತ್ವಕ್ಕೆ ಬಂದಿತು. ಅರ್ಜುನ್ ದೇವ್ ಅವರು ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಪತ್ರಿಕಾ ಅಕಾಡೆಮಿಯನ್ನು ಸಮಗ್ರ ಮುನ್ನೋಟದಿಂದ ಮಾಧ್ಯಮ ಅಕಾಡೆಮಿ ಎಂದು ಬದಲಿಸಲಾಯಿತು. ಅಕಾಡೆಮಿ ಜೊತೆಗೆ ಕೆಯುಡಬ್ಲ್ಯುಜೆ ಅವಿನಾಭಾವ ಸಂಬಂಧ ಹೊಂದಿದೆ. ಈ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೆಯುಡಬ್ಲ್ಯುಜೆ ದತ್ತಿ ನಿಧಿ ಸ್ಥಾಪನೆ ಮಾಡಲಾಗಿದೆ ಎಂದರು.
ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿ, ಅಕಾಡೆಮಿ ಹುಟ್ಟಿಗೆ ಕಾರಣವಾದ ಕಾರ್ಯನಿರತ ಪತ್ರಕರ್ತರ ಸಂಘವು ಮಾಧ್ಯಮ ಅಕಾಡೆಮಿಯಲ್ಲಿ ದತ್ತಿ ನಿಧಿ ಸ್ಥಾಪನೆ ಮಾಡಿರುವುದು ಅಭಿಮಾನದ ಸಂಗತಿ. ಪ್ರತಿ ವರ್ಷ ವಾರ್ಷಿಕ ಪ್ರಶಸ್ತಿ ಸಂದರ್ಭದಲ್ಲಿ ಪ್ರತಿಭಾನ್ವಿತ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಈ ರೀತಿಯಲ್ಲಿ ಸರ್ವಸಮ್ಮತ ತೀರ್ಮಾನ ತೆಗೆದುಕೊಂಡ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಆಡಳಿತ ಮಂಡಳಿಯನ್ನು ಅಭಿನಂದಿಸುತ್ತೇನೆ ಎಂದರು. ಅಕಾಡೆಮಿ ಕಾರ್ಯದರ್ಶಿ ರೂಪ ಮಾತನಾಡಿ, ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಯಾದ ಕಾರ್ಯನಿರತ ಪತ್ರಕರ್ತರ ಸಂಘವು ಅಕಾಡೆಮಿಯಲ್ಲಿ ಪ್ರಶಸ್ತಿ ಸ್ಥಾಪನೆ ಮಾಡಿರುವುದಕ್ಕೆ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದರು.
ಅಕಾಡೆಮಿ ಸದಸ್ಯರಾದ ಪಬ್ಲಿಕ್ ಟಿವಿಯ ಬದ್ರುದ್ದೀನ್, ಶಿವಕುಮಾರ್ ಬೆಳ್ಳಿತಟ್ಟೆ ಮಾತನಾಡಿ, ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೆರವಾಗುವ ಮೂಲಕ ಕೆಯುಡಬ್ಲ್ಯುಜೆ ಇತಿಹಾಸಕ್ಕೆ ಹೊಸ ದಿಕ್ಕು ತೋರಿಸಿ, ಹೊಸ ಭಾಷ್ಯ ಬರೆದ ಹೆಗ್ಗಳಿಕೆ ತಗಡೂರು ಅವರದ್ದು. ಇದೊಂದು ನಿರ್ಧಾರ ಎರಡೂ ಸಂಸ್ಥೆಗಳ ನಡುವೆ ಹೊಸ ಸಂಪ್ರದಾಯ ಹುಟ್ಟುಹಾಕಿದೆ ಎಂದರು. ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಸೋಮಶೇಖರ ಕೆರಗೋಡು, ಖಜಾಂಚಿ ವಾಸುದೇವ ಹೊಳ್ಳ ಮಾತನಾಡಿದರು. ರಾಜ್ಯ ಸಮಿತಿಯ ಸದಸ್ಯ ದೇವರಾಜ್‌ ಮತ್ತಿತರರು ಹಾಜರಿದ್ದರು.
‘ಹೆಂಡ್ತಿಯನ್ನು ಚೆನ್ನಾಗಿ ನೋಡಿಕೊ’ ಎಂದ ಸಂಬಂಧಿಕರಿಬ್ಬರಿಗೂ ಇರಿದ; ಒಬ್ಬನ ಸಾವು, ಇನ್ನೊಬ್ಬನ ಪರಿಸ್ಥಿತಿ ಗಂಭೀರ

ಪತ್ನಿ ಗರ್ಭಿಣಿ, ಪತಿಗೆ ಅನುಮಾನ; ಹೊರಬಿತ್ತು ಕೊಲೆ ಹಿಂದಿನ ಕಾರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 9 =
Remember me
