ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್​ನಿಂದ ನೀಡಲಾಗುವ 2021ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳು ಪ್ರಕಟಗೊಂಡಿದ್ದು, “ಚಾವುಂಡರಾಯ ದತ್ತಿ ಪ್ರಶಸ್ತಿ”ಗೆ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಶಾಂತಿನಾಥ ದಿಬ್ಬದ, “ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ಪ್ರಶಸ್ತಿ”ಗೆವಿಜಯವಾಣಿಸಂಪಾದಕ ಕೆ.ಎನ್​. ಚನ್ನೇಗೌಡಭಾಜನರಾಗಿದ್ದಾರೆ. “ಕನ್ನಡ ಕಾಯಕ ಪ್ರಶಸ್ತಿ’ಗೆ ಕನ್ನಡಪರ ಹೋರಾಟಗಾರ ಬಸವಲಿಂಗ ಸ್ವಾಮೀಜಿ (ಮಹಾರಾಷ್ಟ್ರ), ಸಾಹಿತಿ ಡಾ. ಆರ್​.ಶಂಕರಪ್ಪ ಹಾಗೂ ರಂಗಭೂಮಿ ಕಲಾವಿದ ಕೆ. ಇಮಾಮ ಸಾಬ ಆಯ್ಕೆಯಾಗಿದ್ದಾರೆ.
“ಚಾವುಂಡರಾಯ ದತ್ತಿ ಪ್ರಶಸ್ತಿ”ಯು 30 ಸಾವಿರ ರೂ. ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಉಳಿದ ಪ್ರಶಸ್ತಿ ಪುರಸತರಿಗೆ ತಲಾ 10 ಸಾವಿರ ರೂ. ನಗದು, ಪ್ರಶಸ್ತಿಪತ್ರ ಹಾಗೂ ಫಲಕ ನೀಡಿ ಸನ್ಮಾನಿಸಲಾಗುವುದು.
ಅ.21ರಂದು ಪ್ರದಾನ:ಅ.21ರ ಸಂಜೆ 4.30ಕ್ಕೆ ಕನ್ನಡ ಸಾಹಿತ್ಯ ಪರಿಷತ್​ನ ಶ್ರೀ ಕೃಷ್ಣರಾಜ ಪರಿಷತ್​ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ಎನ್​. ಸಂತೋಷ್​ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿದ್ವಾಂಸ ಡಾ. ಹಂಪ ನಾಗರಾಜಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆ ವಹಿಸಲಿದ್ದಾರೆ. ದತ್ತಿ ದಾನಿಗಳಾದ ಡಾ. ಪದ್ಮಿನಿ ನಾಗರಾಜು, ಎನ್​.ಕೆ. ರಮೇಶ್​, ವ.ಚ.ಚನ್ನೇಗೌಡ ಮತ್ತಿತರರು ಭಾಗವಹಿಸಲಿದ್ದಾರೆ.
ಬೆಳ್ಳಂಬೆಳಗ್ಗೆ ಚಾಮುಂಡಿ ಸನ್ನಿಧಿಗೆ ಆಗಮಿಸಿದ ಜೆಡಿಎಸ್​ ಪಡೆ

‘ಸ್ವಾಮಿ ಕೊರಗಜ್ಜ ಆದಿಸ್ಥಳ ಕುತ್ತಾರು’ ವೆಬ್​ಸೈಟ್ ಬಿಡುಗಡೆ

ಭಕ್ತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಹಾಸನಾಂಬೆ ದರ್ಶನ ಅವಧಿ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
