ಬೆಂಗಳೂರು:ವಿಶ್ವ ಕೆಡೆಟ್ ಚೆಸ್ ಚೆಸ್ ​ಚಾಂಪಿಯನ್​​ಶಿಪ್ 8 ವರ್ಷದೊಳಗಿನವರ ಪ್ರಶಸ್ತಿ ವಿಜೇತರಾಗಿರುವ ಕರ್ನಾಟಕದ ಚಾರ್ವಿಗೆ ಕ್ರೀಡಾ ಸಚಿವ ನಾರಾಯಣಗೌಡ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.
ಜಾರ್ಜಿಯದ ಬಟುಮಿಯಲ್ಲಿ ನಡೆದ ವಿಶ್ವ ಕೆಡೆಟ್ಸ್‌ ಚೆಸ್‌ ಚೆಸ್ ​ಚಾಂಪಿಯನ್​​ಶಿಪ್​ನ ಬಾಲಕಿಯರ 8 ವರ್ಷದೊಳಗಿನವರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು, ರಾಜ್ಯಕ್ಕೆ ಕೀರ್ತಿ ತಂದಿರುವ ಚಾರ್ವಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಚಾರ್ವಿ ಅಪಾರ ಪ್ರತಿಭೆ ಹೊಂದಿದ್ದು, ಚಿಕ್ಕ ವಯಸ್ಸಿನಲ್ಲೇ ಅಪ್ರತಿಮ ಸಾಧನೆ ಮಾಡುತ್ತಿದ್ದಾಳೆ. ಮುಂದಿನ ತಿಂಗಳು ಇಂಡೊನೇಷ್ಯಾದಲ್ಲಿ ನಡೆಯಲಿರುವ ಏಷ್ಯನ್‌ ಯೂತ್‌ ಚೆಸ್ ​ಚಾಂಪಿಯನ್​​ಶಿಪ್​ನಲ್ಲೂ ಆಕೆ ದೇಶವನ್ನು ಪ್ರತಿನಿಧಿಸುವಳು. ನವೆಂಬರ್‌ನಲ್ಲಿ ಶ್ರೀಲಂಕಾದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಚೆಸ್‌ ಕೂಟದಲ್ಲೂ ಪಾಲ್ಗೊಳ್ಳಲಿದ್ದಾಳೆ. ಈ ಬಾಲ ಪ್ರತಿಭೆಗೆ ಎಲ್ಲಾ ರೀತಿಯ ನೆರವು ನೀಡಲಿದ್ದು, 5 ಲಕ್ಷ ರೂ. ನಗದು ಪುರಸ್ಕಾರ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸಾಧನೆ ಮಾಡಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದರು‌.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
