



ಬ್ರಹ್ಮಶ್ರೀ ನಾರಾಯಣ ಗುರುವಿಗೆ ನಮನ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ನೂರಾರು ಗುರುಮಂದಿರಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜಯಂತ್ಯುತ್ಸವ ವೈಭವಯುತ ವಾಗಿ ನೆರವೇರಿತು. ಗುರುಮಂದಿರಗಳಲ್ಲಿ ವಿಶೇಷ ಪೂಜೆ, ಭಜನೆ, ಪ್ರವಚನ-ಉಪನ್ಯಾಸ ಮತ್ತಿತರ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರು ಜಯಂತಿಯನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟಿಸಿದರು. ಉಡುಪಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶ್ರೀ ನಾರಾಯಣಗುರುಗಳ ಮೂರ್ತಿಯನ್ನು ವಿಶೇಷವಾಗಿ ವಿವಿಧ ಬಗೆಯ ಹೂವು ಹಾಗೂ ತುಳಸಿ ಮಾಲೆಯಿಂದ ಅಲಂಕರಿಸಲಾಗಿತ್ತು. ಮೂರು ಹೊತ್ತು ಗುರು ಪ್ರಾರ್ಥನೆ, ಗುರುಪೂಜೆ ನೆರವೇರಿತು. ಮಂಗಳೂರು ವಿ.ವಿ.ಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ ಕುದ್ರೋಳಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಮೂಲ್ಕಿಯಲ್ಲಿ ಕಾರ್ಯಕ್ರಮ ನಡೆಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eight =
Remember me
