ಮಂಡ್ಯ:ವಿಶ್ವವಿಖ್ಯಾತ ಕೃಷ್ಣರಾಜಸಾಗರ ಅಣೆಕಟ್ಟೆ ಸಮೀಪ ಇಂದು(ಗುರುವಾರ) ಬೆಳಗ್ಗೆ ಮತ್ತೊಂದು ಚಿರತೆ ಬಲೆಗೆ ಬಿದ್ದಿದೆ. ಕಳೆದ ಅಕ್ಟೋಬರ್​ನಲ್ಲಿ ಬೃಂದಾವನದಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಸೆರೆಗಾಗಿ ಅರಣ್ಯ ಸಿಬ್ಬಂದಿ ಅಂದಿನಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದರು. ಬಲೆಗೆ ಬೀಳದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಚಿರತೆ, ಸಿಬ್ಬಂದಿ ಮತ್ತು ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿತ್ತು. ಕೊನೆಗೂ ಚಿರತೆಯೊಂದು ನಿನ್ನೆ(ಬುಧವಾರ) ಬೋನಿಗೆ ಬಿದ್ದಿತ್ತು. ಅಬ್ಬಾ! ಚಿರತೆ ಸಿಕ್ಕಿತೆಂದು ಜನ ನಿಟ್ಟುಸಿರು ಬಿಟ್ಟಿದ್ದರು. ಇದಾದ ಮರುದಿನವೇ ಮತ್ತೊಂದು ಚಿರತೆ ಬೋನಿಗೆ ಬಿದ್ದಿದ್ದು, ಇನ್ನೂ ಚಿರತೆಗಳಿರುವ ಭಯ ಆವರಿಸಿದೆ.
ಅ.22ರ ಬೆಳಗ್ಗೆ ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನ ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿತ್ತು. ಅಂದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಇದಾದ ಮರುದಿನ ಕೂಡ ಚಿರತೆ ಕಾಣಿಸಿಕೊಂಡಿತ್ತು. ಸಿಸಿ ಟಿವಿಯಲ್ಲಿ ಈ ದೃಶ್ಯ ಸೆರೆಯಾಗಿತ್ತು. ಆ ವಾರದಲ್ಲೇ ಮೂರು ಬಾರಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆ ಸೆರೆಗೆ ಅರಣ್ಯ ಇಲಾಖೆಯು ಬೋನ್ ಇರಿಸಿ, ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆ ವೇಳೆ ಕಾಣಿಸಿಕೊಳ್ಳದ ಚಿರತೆ, ಅ.28 ಸಂಜೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಹೀಗೆ ಎರಡು ತಿಂಗಳಿನಿಂದ ಡ್ಯಾಂ ಸುತ್ತ ಬೃಂದಾವನ ಬಳಿ ಸಂಚರಿಸುತ್ತಿದ್ದ ಚಿರತೆ, ಅಕ್ಕ ಪಕ್ಕದ ಗ್ರಾಮಗಳಲ್ಲಿ ಬೀದಿನಾಯಿ ಹಾಗೂ ಸಾಕುಪ್ರಾಣಿಗಳನ್ನ ಬೇಟೆಯಾಡಿ ಆತಂಕ ಹುಟ್ಟಿಸಿತ್ತು. ಹಾಗಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಉತ್ತರ ಬೃಂದಾವನದ ಹಣ್ಣಿನ ತೋಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ನಿನ್ನೆ(ಬುಧವಾರ) ಚಿರತೆಯೊಂದು ಸೆರೆಯಾಗಿತ್ತು. ಇದೀಗ ಕೆಆರ್​ಎಸ್​ನಿಂದ 2 ಕಿ.ಮೀ. ದೂರದ ಬಸ್ತಿಹಳ್ಳಿ ಬಳಿ ಬೋನ್​ಗೆ ಇನ್ನೊಂದು ಚಿರತೆ ಬಿದ್ದಿದೆ.
ಕೆಆರ್​ಎಸ್​ ಡ್ಯಾಂ ಬಳಿ ಆತಂಕ ಸೃಷ್ಟಿಸಿದ್ದ ಚಿರತೆ: 3 ತಿಂಗಳ ಬಳಿಕ ಕೊನೆಗೂ ಬೋನಿಗೆ ಬಿದ್ದ ಚಿರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
