ಬೆಂಗಳೂರು:ಹಿರಿಯ ಸಂಶೋಧಕ, ಕನ್ನಡ ಬರಹಗಾರ ಡಾ. ಚಿದಾನಂದ ಮೂರ್ತಿ ಅವರ ಅಂತ್ಯಕ್ರಿಯೆ ಇಂದು ಸುಮನಹಳ್ಳಿ ಚಿತಾಗಾರದಲ್ಲಿ ನಡೆಯಿತು.
ಯಾವುದೇ ರೀತಿಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದು ಚಿದಾನಂದಮೂರ್ತಿಯವರಿಗೆ ಇಷ್ಟವಿರಲಿಲ್ಲ. ಅವರ ಕೊನೆಯಾಸೆಯಂತೆಯೇ ಕುಟುಂಬಸ್ಥರು ಅಂತಿಮ ಸಂಸ್ಕಾರ ನಡೆಸಿದ್ದಾರೆ.ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸೋಮಣ್ಣ, ಮುನಿರತ್ನ ಮತ್ತಿತರರು ಚಿತಾಗಾರಕ್ಕೆ ಆಗಮಿಸಿ ಚಿಮೂ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಅಂತ್ಯಕ್ರಿಯೆ ಬಳಿಕ ಮಾತನಾಡಿದ ಚಿದಾನಂದಮೂರ್ತಿಯವರ ಪುತ್ರ, ನಾವೆಲ್ಲರೂ ರಾಜ್ಯಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇವೆ. ಹುಟ್ಟೂರಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದರು. ಆದರೆ ನಮ್ಮ ತಂದೆಯ ಆಸೆ ಬೇರೆಯಿತ್ತು. ಹಾಗಾಗಿ ಅವರೆಲ್ಲರ ಕ್ಷಮೆ ಕೇಳುತ್ತೇವೆ. ಅವರ ಅಸ್ತಿಯನ್ನು ಹಂಪಿಯಲ್ಲಿ ವಿಸರ್ಜನೆ ಮಾಡಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seven =
Remember me
