ಬೆಂಗಳೂರು: ಲಾಕ್‌ಡೌನ್‌ನಿಂದ ಮನುಷ್ಯರು ಮಾತ್ರವಲ್ಲದೇ ಪ್ರಾಣಿ- ಪಕ್ಷಿಗಳೂ ತತ್ತರಿಸಿ ಹೋಗಿವೆ. ಬಿಸಿಲಿನ ಝಳ ಒಂದೆಡೆಯಾದರೆ, ಹೋಟೆಲ್‌, ರೆಸ್ಟೋರೆಂಟ್‌ ಎಲ್ಲವೂ ಬಂದಾಗಿರುವ ಕಾರಣ, ಪ್ರಾಣಿ, ಪಕ್ಷಿಗಳೂ ಉಪವಾಸದಿಂದ ಇರುವಂತಾಗಿವೆ.
ಆದ್ದರಿಂದ ಪ್ರಾಣಿ, ಪಕ್ಷಿಗಳ ಬಗ್ಗೆಯೂ ಕಳಕಳಿ ತೋರುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ‘ ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ. ಬೆಂಗಳೂರಿನಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ. ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ’ ಎಂದು ವಿನಂತಿಸಿಕೊಂಡಿದ್ದಾರೆ.
ತಾವು ಬೆಕ್ಕಿನ ಮರಿಗೆ ಹಾಲು ನೀಡಿ ದೂರದಲ್ಲಿ ನಿಂತಿರುವ ಫೋಟೋ ಅನ್ನು ಅವರು ಶೇರ್‌ ಮಾಡಿದ್ದಾರೆ. ಈ ಟ್ವೀಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈಗಾಗಲೇ ಈ ಫೋಟೋಗೆ ಎರಡು ಸಾವಿರಕ್ಕೂ ಅಧಿಕ ಲೈಕ್‌ಗಳು ಬಂದಿದ್ದು, ಮುಖ್ಯಮಂತ್ರಿಗಳ ಕ್ರಮವನ್ನು ಶ್ಲಾಘಿಷಿ ಹಲವರು ಕಮೆಂಟ್‌ಗಳೂ ಬಂದಿವೆ.
ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು ಹಾಗೂ ಪಕ್ಷಿಗಳು ನೀರು ಮತ್ತು ಆಹಾರ ಸಿಗದೆ ತತ್ತರಿಸುತ್ತಿವೆ.
ನಗರಗಳಲ್ಲಿ ಇದರ ಪರಿಣಾಮ ಇನ್ನೂ ಗಂಭೀರವಾಗಿದೆ. ಹಾಗಾಗಿ, ನಾಯಿಗಳಿಗೆ ಮತ್ತು ಪಕ್ಷಿಗಳಿಗೆ ನೀರು, ಆಹಾರ ಸಿಗುವಂತೆ ನೋಡಿಕೊಳ್ಳಬೇಕೆಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ.#feedthehungerspic.twitter.com/k7r8NQQrPD
— B.S.Yediyurappa (@BSYBJP)April 10, 2020

ಇನ್ನು ಮನೆ ಬಾಗಿಲಿಗೇ ಮದ್ಯ!: ದುಬೈನಲ್ಲಿ ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
