ಬೆಂಗಳೂರು:ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಬುಧವಾರ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಕೇಕ್ ಕತ್ತರಿಸುವ ಮೂಲಕ ತನ್ನ 72 ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಪಕ್ಷವನ್ನು ಸಂಘಟನಾತ್ಮಕವಾಗಿ, ಸದೃಢವಾಗಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮ ಪಟ್ಟು ದುಡಿಯಬೇಕು. ನಾವು ಎಂದಿಗೂ ರಾಜಕಾರಣವನ್ನು ಮಾಡಲು ಬಂದಿಲ್ಲ ರಾಜಕಾರಣವನ್ನು ಬದಲಾಯಿಸಲು ಬಂದಿದ್ದೇವೆ ಎಂದ ಅವರು, ಕೇಜ್ರಿವಾಲ್ ರವರ ಕನಸನ್ನು ಕರ್ನಾಟಕದಲ್ಲಿಯೂ ಸಾಕಾರಗೊಳಿಸಲು ಭ್ರಷ್ಟ ಮುಕ್ತ ಪ್ರಾಮಾಣಿಕರನ್ನು ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ ಸೇರಿ ರಮೇಶ್ ಬೆಳ್ಳಂಕೊಂಡ, ರುದ್ರಯ್ಯ ನವಲಿ ಮಠ, ಜಗದೀಶ್‌ವಿ ಸದಂ, ದರ್ಶನ್ ಜೈನ್ ,ಗೋಪಾಲ್, ರಂಗಯ್ಯ, ಸುಷ್ಮಾ ವೀರ್, ಪ್ರಕಾಶ್ ನೆಡಂಗಡಿ, ಡಾ. ಸತೀಶ್ ಕುಮಾರ್ ಹಾಗೂ ಅನೇಕ ಮುಖಂಡರುಗಳು ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
