ಬೆಂಗಳೂರು:ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹೆಚ್ಚು ಹಿಂದುಳಿದಿರುವ ಪರಿಶಿಷ್ಟ ಜಾತಿಗಳಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸ್ವಾಗತಿಸಿದ್ದಾರೆ.
ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿರುವ ಪರಿಶಿಷ್ಟ ಸಮಾಜದ ಜನತೆಗೆ ಸಿಕ್ಕ ಜಯ ಇದಾಗಿದ್ದು,ರಾಜ್ಯ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ ಕಳೆದ 12 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿರುವ ಎಲ್ಲ ಅಂಶಗಳನ್ನು ಜಾರಿಗೆ ತರಬೇಕು
ಪರಿಶಿಷ್ಟ ವರ್ಗಗಳ ಬಹಳ ವರ್ಷಗಳ ಆಂದೋಲನದ ಪರಿಣಾಮವಾಗಿ ರಾಜ್ಯ ಸರ್ಕಾರಕ್ಕೆ ನೀಡಿರುವ ಈ ಅಧಿಕಾರವನ್ನು ಶೋಷಿತ ಸಮಾಜಗಳನ್ನು ಮೇಲೆತ್ತುವಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಾದರಿಯಾಗಬೇಕಿದೆ ಹಾಗೂ ಅಹಿಂದ ವರ್ಗದಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ವರ್ಗಗಳೊಂದಿಗೆ ಸೂಕ್ತ ಸಮಾಲೋಚನೆ – ಸಂಧಾನಗಳ ಮೂಲಕ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − thirteen =
Remember me
