ಬೆಂಗಳೂರು:ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಸಾರ್​ ಅಹ್ಮದ್ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕನ್ನಡದ ನಿತ್ಯೋತ್ಸವ ಕವಿ ಡಾ.ಕೆ.ಎಸ್​. ನಿಸಾರ್​ ಅಹಮ್ಮದ್​ ಇನ್ನಿಲ್ಲ
ಹಾಗೇ ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ಅವರೂ ಕೂಡ ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ನಿತ್ಯೋತ್ಸವ ಕವಿ, ಕನ್ನಡ ಕಾವ್ಯ ಜಗತ್ತಿಗೆ ನವೋಲ್ಲಾಸ ತಂದುಕೊಟ್ಟ ಉತ್ಸಾಹದ ಚಿಲುಮೆ ಪ್ರೊ.ಕೆ.ಎಸ್​.ನಿಸಾರ್ ಅಹ್ಮದ್​ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಅವರ ಕುಟುಂಬಕ್ಕೆ, ಸಾರಸ್ವತ ಲೋಕಕ್ಕೆ ಇವರ ಅಗಲಿಕೆಯನ್ನು ಭರಿಸುವ ಶಕ್ತಿ ದೊರೆಯಲಿ. ಪ್ರೊ.ನಿಸಾರರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
