ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಪ್ರಸಂಗ ನಡೆಯಿತು.
ಇದನ್ನೂ ಓದಿ:ಕೋಲ್ಕತ್ತಾ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆ ಮಂಡಿಸಲಿದೆ ಮಮತಾ ಬ್ಯಾನರ್ಜಿ ಸರ್ಕಾರ
ಸಿಎಂ ಸಿದ್ದರಾಮಯ್ಯ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್ (ನಮಾಜ್). ಸಿದ್ದರಾಮಯ್ಯನವರು ಮಾತನಾಡುತ್ತಿದ್ದ ಸಂದರ್ಭದಲ್ಲಿ ಆಜಾನ್ ಪ್ರಾರಂಭವಾದ ಹಿನ್ನೆಲೆಯಲ್ಲಿ 5 ನಿಮಿಷ ಭಾಷಣ ನಿಲ್ಲಿಸಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಇದ್ದವರೂ ಮೌನಕ್ಕೆ ಶರಣಾದರು. ಆಜಾನ್‌ ಮುಗಿದ ನಂತರ ಸಿದ್ದರಾಮಯ್ಯ ಭಾಷಣವನ್ನು ಮುಂದುವರಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 2) ಬೆಂಗಳೂರಿನ ಶಿವಾಜಿನಗರದ ಬ್ರಾಡ್​ವೇ ರಸ್ತೆಯಲ್ಲಿರುವ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದರು.
ಶಿವಾಜಿನಗರದಲ್ಲಿರುವ ಈ ಆಸ್ಪತ್ರೆಯು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಅಧೀನದಲ್ಲಿದ್ದು ಇಂದು ಇದನ್ನು ಇಂದು ಅಧಿಕೃತವಾಗಿ ಮುಖ್ಯಮಂತ್ರಿ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು.
24.38 ಕೋಟಿ ರೂ,ವೆಚ್ಚದಲ್ಲಿ ಬಿಬಿಎಂಪಿ ವತಿಯಿಂದ 2020ರಲ್ಲಿ ನಿರ್ಮಿಸಲಾಗಿದ್ದ ಈ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿಯ ನೇಮಕಾತಿ ಆಗಿರಲಿಲ್ಲ. ಇದರಿಂದ ಕಾರ್ಯಾರಂಭಗೊಂಡಿರಲಿಲ್ಲ. ಈಗ ಆಸ್ಪತ್ರೆಗೆ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಐಸಿಯುದಲ್ಲಿನ 20 ಹಾಸಿಗೆಗಳು ಸೇರಿ ಒಟ್ಟು 130 ಹಾಸಿಗೆಗಳ 4 ಮಹಡಿಗಳ ಈ ಆಸ್ಪತ್ರೆ ಒಳಗೊಂಡಿದೆ.
ಪಂಚ ಗ್ಯಾರಂಟಿಗಳ ಜೊತೆ ಶಿಕ್ಷಣ, ಆರೋಗ್ಯದ ಗ್ಯಾರಂಟಿ ಸರ್ಕಾರದ ಗುರಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + twenty =
Remember me
