ಮೈಸೂರು:ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಲಾಗುವ ಮುಖ್ಯಮಂತ್ರಿ ಪದಕವನ್ನು ಈ ಬಾರಿ ಕರ್ತವ್ಯ ಲೋಪದಡಿ ಅಮಾನತುಗೊಂಡಿದ್ದ ಪೊಲೀಸ್ ಪೇದೆಯೊಬ್ಬರಿಗೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ನಗರದ ಸಿಸಿಬಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆ ಸಲೀಂ ಪಾಷಾ ಕರ್ತವ್ಯ ಲೋಪದಡಿ ಒಂದು ತಿಂಗಳ ಹಿಂದೆ ಅಮಾನತುಗೊಂಡಿದ್ದರು. ಆದರೆ, ಇದೀಗ ಅವರಿಗೆ ಮುಖ್ಯಮಂತ್ರಿ ಪದಕ ನೀಡಿರುವುದು ಪೊಲೀಸ್ ಇಲಾಖೆ ಹಾಗೂ ಸರ್ಕಾರಕ್ಕೆ ಮುಜುಗರ ತರಿಸಿದೆ.
ಅಪರಾಧ ಪ್ರಕರಣಗಳಲ್ಲಿ ಆರೋಪಿಗಳೊಂದಿಗೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ, ದಾಖಲೆಗಳ ಸೋರಿಕೆ ಮಾಡಿರುವ ಶಂಕೆಯ ಮೇರೆಗೆ ಸಲೀಂ ಪಾಷಾ ಅವರನ್ನು ಅಮಾನತು ಮಾಡಲಾಗಿತ್ತು. ಇಷ್ಟೆಲ್ಲ ಆರೋಪಗಳಿರುವ ವ್ಯಕ್ತಿಯ ಹೆಸರನ್ನು ಮುಖ್ಯಮಂತ್ರಿಗಳ ಪದಕದ ಪಟ್ಟಿಗೆ ಹೇಗೆ ಪರಿಗಣಿಸಲಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ.
ರೂಬಿ ಪ್ಲೇ ಬಟನ್​ ಪಡೆದ ಕೇರಳದ ಫಸ್ಟ್ ಯೂಟ್ಯೂಬ್​ ಚಾನೆಲ್​! ಇವರ 1 ವಿಡಿಯೋ ಆದಾಯ ಹುಬ್ಬೇರಿಸುತ್ತೆ

ದೇಶಿ ಕ್ರಿಕೆಟ್​ನಲ್ಲೂ ಸಿಗದ ಸ್ಥಾನ! ಅಂತ್ಯವಾಯ್ತು ಟೀಮ್​ ಇಂಡಿಯಾ ಸ್ಟಾರ್​ ಆಟಗಾರನ ವೃತ್ತಿ ಬದುಕು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 5 =
Remember me
