ಬೆಂಗಳೂರು:ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು (ಜೂ.11) ಬೆಳಗ್ಗೆ 11 ಗಂಟೆಗೆ ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ.
ವಿಶೇಷ ಏನೆಂದರೆ, ಇಂದು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಕಾಲ ಕಂಡಕ್ಟರ್​ ಆಗಲಿದ್ದು, ಟಿಕೆಟ್​ ವಿತರಣೆ ಮಾಡಲಿದ್ದಾರೆ. ಉಚಿತ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ರಾಜ್ಯಾದ್ಯಂತ ಮಹಿಳೆಯರು ಎದುರು ನೋಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಅವರು ಟಿಕೆಟ್​ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದರ ನಡುವೆ ಮೊದಲ ಟಿಕೆಟ್​ ಯಾರು ಪಡೆಯಲಿದ್ದಾರೆ ಎಂಬ ಕುತೂಹಲ ಸಹಜವಾಗಿಯೇ ಮೂಡುತ್ತದೆ. ಅದಕ್ಕೆ ಉತ್ತರ ಇಲ್ಲಿದೆ.
ಇದನ್ನೂ ಓದಿ:ರಾಮನ ರೀತಿ ಕಾಣುತ್ತಿಲ್ಲ ಬದಲಾಗಿ… ಪ್ರಭಾಸ್​ ಕುರಿತು ನಟಿ ಕಸ್ತೂರಿ ಕಾಮೆಂಟ್​, ಫ್ಯಾನ್ಸ್​ ಆಕ್ರೋಶ!
ಮೊದಲ ಉಚಿತ ಪ್ರಯಾಣದ ಟಿಕೆಟ್ ಪಡೆಯುವ ಮಹಿಳೆ ಯಾರೆಂದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು. ಸಿಎಂ ಸಿದ್ದರಾಮಯ್ಯರಿಂದ ಉಚಿತ ಟಿಕೆಟ್ ಪಡೆದ ಮೊದಲ ಮಹಿಳಾ ಪ್ರಯಾಣಕಿ ಎಂಬ ಹೆಗ್ಗಳಿಕೆಗೆ ವಂದಿತ ಶರ್ಮಾ ಭಾಜನರಾಗಲಿದ್ದಾರೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿಯ ಉಚಿತ ಪ್ರಯಾಣದ ಮೊದಲ ಬಸ್ ಟಿಕೆಟ್ ಅನ್ನು ವಂದಿತಾ ಶರ್ಮ ಅವರು ಪಡೆಯಲಿದ್ದಾರೆ ಎಂದು ಸಾರಿಗೆ ನಿಗಮದ ಮೂಲಗಳಿಂದ ದಿಗ್ವಿಜಯ ನ್ಯೂಸ್​ಗೆ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
1. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸತಕ್ಕದ್ದು.
2. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
3. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50 ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.
ಇದನ್ನೂ ಓದಿ:ಡಿಜಿಟಲ್ ಪಾವತಿ, ಭಾರತ ನಂ.1: 2022ರಲ್ಲಿ ನಡೆದ ನಗದು ವರ್ಗಾವಣೆ | ಜಾಗತಿಕ ವಹಿವಾಟಿನಲ್ಲಿ ಇಂಡಿಯಾ ಪಾಲು ಶೇ. 46
4. ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.
4. “ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು.
ಜೂ. 11ರಂದು ಶಕ್ತಿ ಯೋಜನೆಗೆ ಚಾಲನೆ: ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಲೋಕಸಭಾ ಚುನಾವಣೆ, 20 ಕಡೆ ಕೈ ಹೊಸ ಹುರಿಯಾಳು?; ಬಿಜೆಪಿ ಬಳಿಕ ಕಾಂಗ್ರೆಸ್​ನಲ್ಲೂ ಬಿರುಸಿನ ಚಟುವಟಿಕೆ, ಸಮರ್ಥ ಅಭ್ಯರ್ಥಿಗಳಿಗಾಗಿ ಆಪರೇಷನ್ ಹಸ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 7 =
Remember me
