ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನೆಹರು ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಪಂಡಿತ್ ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಅಭಿವೃದ್ಧಿಗೆ ಬಹಳಷ್ಟು ಪರಿಶ್ರಮ ಪಟ್ಟವರು. ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್ಮೆಂಟ್ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ನೆಹರು ಮಾಡಿರುವ ಕೆಲಸ ಅದ್ಭುತ ವಾಗಿದೆ ಎಂದು ಕೊಂಡಾಡಿದರು.
ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 9 =
Remember me
