ಬೆಂಗಳೂರು: ಬೆಳಗಾವಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಹಾಗೂ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಜಿಲ್ಲೆಯಾಗಿದ್ದು ಅಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ಶಾಸಕ ಅಭಯ್ ಪಾಟೀಲ ನೇತೃತ್ವದ ಬೆಳಗಾವಿಯ ವಾಣಿಜ್ಯೋದ್ಯಮಿಗಳ ನಿಯೋಗದೊಂದಿಗೆ ವಿಧ ವಿಷಯಗಳ ಕುರಿತು ಚರ್ಚಿಸಿದ ಸಿಎಂ, ಬೆಳಗಾವಿ ಜಿಲ್ಲೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆ ಸ್ಥಾಪಿಸುವ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಬೆಳಗಾವಿಯಲ್ಲಿ ಫೌಂಡ್ರಿ ಮತ್ತು ಹೈಡ್ರಾಲಿಕ್ಸ್ ಉದ್ಯಮಗಳಿಗೆ ಉತ್ತೇಜನ ನೀಡಲು ಫೌಂಡ್ರಿ ಪಾರ್ಕ್ ಸ್ಥಾಪಿಸುವಂತೆ ನಿಯೋಗವು ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ, ಭೂಮಿ ಗುರುತಿಸಿ, ಸ್ವಾಧೀನ ಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಇಂಟೆಗ್ರೇಟೆಡ್ ಟೆಕ್ಸ್ಟೈಲ್ ಉದ್ಯಮ ಸ್ಥಾಪಿಸಲು ಮುಂದೆ ಬರಬೇಕು. ಮುಂಬೈ ಚೆನ್ನೈ ಕಾರಿಡಾರ್ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಟೌನ್ ಷಿಪ್ ರಚಿಸಲಾಗುವುದು. ಇದರ ಸದುಪಯೋಗವನ್ನು ಉದ್ಯಮಿಗಳು ಮಾಡಿಕೊಳ್ಳಬೇಕು. ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಿ ಬೆಳಗಾವಿ-ಕಿತ್ತೂರು-ಧಾರವಾಡ ರೈಲುಮಾರ್ಗ ಯೋಜನೆಯನ್ನು ಮೊದಲ 5 ಆದ್ಯತೆಯ ಯೋಜನೆಗಳಲ್ಲಿ ಪರಿಗಣಿಸುವಂತೆ ಕೇಂದ್ರ ರೈಲ್ವೆ ಸಚಿವರನ್ನು ಕೋರಲಾಗಿದೆ. ಸರ್ಕಾರ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಿದೆ ಎಂದರು.
ಇದಲ್ಲದೆ ಎಂಎಸ್ಎಂಇ ಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ವಿಧಿಸುವ ಶುಲ್ಕವನ್ನು ರಾಜ್ಯದಲ್ಲಿ ಕಡಿಮೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಚಂದನ್​ ಶೆಟ್ಟಿಯನ್ನು ಬಿಟ್ಟು ಸೋಲೋ ಟ್ರಿಪ್ ಹೋದ ನಿವೇದಿತಾ; ಇಲ್ಲಿವೆ ನೋಡಿ ಫೋಟೋಗಳು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 3 =
Remember me
