ಚಿಕ್ಕಬಳ್ಳಾಪುರ:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಸಂಬಂಧಿಸಿದಂತೆ ಪ್ರದೀಪ್ ಈಶ್ವರ್ ಅಯ್ಯರ್ ಹೆಸರಿನಲ್ಲಿ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದು ನಕಲಿ ಎನ್ನುವುದು ದೃಢಪಟ್ಟಿದೆ.ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯು ಒಂದೇ ಒಂದೇ ಮತ ಲೀಡ್ ಪಡೆದರೂ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಸವಾಲೆಸೆದಿದ್ದರು. ಇದನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿನ ಸುದ್ದಿಗೋಷ್ಠಿಯಲ್ಲಿ ಖಾತ್ರಿಪಡಿಸಿದ್ದರು. ಇದರ ನಡುವೆ ಸುಧಾಕರ್‌ಗೆ 21 ಸಾವಿರಕ್ಕೂ ಹೆಚ್ಚಿನ ಮತಗಳ ಲೀಡ್ ಸಿಕ್ಕಿದೆ. ಇದಕ್ಕೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಟ್ರೋಲ್ ಹೆಚ್ಚಾಗಿದೆ. ಇದರ ನಡುವೆ ರಾಜೀನಾಮೆ ಸಲ್ಲಿಕೆಯ ನಕಲಿ ಪತ್ರವು ವೈರಲ್ ಆಗಿದೆ.
*ರಾಜೀನಾಮೆ ಪತ್ರ ನಕಲಿ ದೃಢಚರ್ಚೆಗ್ರಾಸವಾದ ಹಿನ್ನೆಲೆಯಲ್ಲಿ ಸ್ವತಃ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರವು ನಕಲಿ ಎಂಬುದನ್ನು ದೃಢಪಡಿಸಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಡಾ ಕೆ.ಸುಧಾಕರ್ ಗೆಲ್ಲುವುದಿಲ್ಲ. ಗೆಲ್ಲಲು ಬಿಡುವುದಿಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯಗಿಂತಲೂ ಒಂದು ಮತ ಲೀಡ್ ಪಡೆದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆದರೆ, ಈ ಸವಾಲನ್ನು ಸುಧಾಕರ್ ಸ್ವೀಕರಿಸಿದರೆ ಮಾತ್ರ ಎಂಬುದಾಗಿ ಹೇಳಲಾಗಿತ್ತು. ಆಗ ಸ್ವೀಕರಿಸಿರಲಿಲ್ಲ. ಇದರಿಂದ ಈಗ ರಾಜೀನಾಮೆ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು ಸ್ವತಃ ಶಾಸಕರು ತಿಳಿಸಿದ್ದಾರೆ.
* ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ರಾಜೀನಾಮೆ ಸಲ್ಲಿಕೆಯ ಲೆಟರ್ ಹೆಡ್ ಪತ್ರ ನಕಲಿ. ವದಂತಿಗಳನ್ನು ಜನರು ನಂಬಬಾರದು. ಚಿಕ್ಕಬಳ್ಳಾಪುರ ಜನರ ಪ್ರೀತಿ ವಿಶ್ವಾಸ ನಂಬಿಕೆ ಮೇಲೆ ಆಯ್ಕೆಯಾಗಿದ್ದು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ.
ಶಾಸಕ ಪ್ರದೀಪ್ ಈಶ್ವರ್ ಕಚೇರಿ ಪ್ರಕಟಣೆ,
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
