ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೆಸರಿನ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಈ ಸಂಬಂಧ ಶಾಸಕ ಪ್ರದೀಪ್ ಈಶ್ವರ್​ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಎನ್​ಡಿಎ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.7ರಂದು ಪ್ರಧಾನಿಯಾಗಿ ಪ್ರಮಾಣವಚನ?
ಈ ಕುರಿತು ಮಾತನಾಡಿರುವ ಶಾಸಕ ಪ್ರದೀಪ್​, ಇದು ನಕಲಿ ಪತ್ರ. ಆ ಪತ್ರಕ್ಕೂ ನನಗೂ ಸಂಬಂಧ ಇಲ್ಲ. ಕಿಡಿಗೇಡಿಗಳು ನಕಲಿ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಈ ಬಗ್ಗೆ ನಾನು ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಡಾ. ಕೆ. ಸುಧಾಕರ್ ಗೆಲುವು ಸಾಧಿಸಿದ ಬಳಿಕ ಶಾಸಕರು ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ ಪ್ರದೀಪ್‌ ಈಶ್ವರ್‌ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಅದು ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಆದರೆ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ 20,941 ಮತಗಳ ಮುನ್ನಡೆಯನ್ನು ಡಾ ಕೆ ಸುಧಾಕರ್‌ ಸಾಧಿಸಿದ್ದಾರೆ. ಇದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಳಿಕ ಅತಿಹೆಚ್ಚು ಲೀಡ್‌ ಬಂದಿರೋದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ ಎಂಬುದನ್ನು ಗಮನಿಸಬೇಕು. ಇದರೊಂದಿಗೆ ಪ್ರದೀಪ್‌ ಈಶ್ವರ್‌ ಮುಂದೆ ಏನ್ಮಾಡ್ತಾರೆ ಎಂಬುದು ಭಾರೀ ಕುತೂಹಲ ಕೆರಳಿಸಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅವರ ಹೆಸರಿನ ನಕಲಿ ಪತ್ರವೊಂದು ಹಂಚಿಕೊಂಡು ನೆಟ್ಟಿಗರು ಟ್ರೋಲ್‌ ಮಾಡುತ್ತಿದ್ದು, ಯಾವಾಗ ರಾಜೀನಾಮೆ ನೀಡ್ತೀರಾ ಎಂದು ಪ್ರಶ್ನಿಸುತ್ತಿದ್ದಾರೆ.
ಅರವಿಂದ್​ ಕೇಜ್ರಿವಾಲ್‌ ಗಿಲ್ಲ ರಿಲೀಫ್: ಮಧ್ಯಂತರ ಜಾಮೀನು ಅರ್ಜಿ ವಜಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
