ಚಿಕ್ಕಮಗಳೂರು:ಹುಲಿ ಉಗುರು ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಬಿಗ್​ಬಾಸ್​ ಸ್ಪರ್ಧಿ ವರ್ತೂರ್​ ಸಂತೋಷ್​ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಬಹಳ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ ಅನೇಕ ಮಂದಿಗೆ ನೋಟಿಸ್​ ಕಳುಹಿಸಿರುವ ಅರಣ್ಯ ಇಲಾಖೆ ಕೆಲವರನ್ನು ಬಂಧನ ಸಹ ಮಾಡಿದೆ. ಇದೀಗ ಅರಣ್ಯಾಧಿಕಾರಿಯೇ ಈ ಪ್ರಕರಣದಲ್ಲಿ ಬಂಧನವಾಗಿದ್ದಾರೆ.
ಕಳಸದ ಡಿ.ಆರ್.ಎಫ್.ಓ. ದರ್ಶನ್​ರನ್ನು ಎನ್​.ಆರ್​. ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ. ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿತ್ತು. ಆದರೆ, ವಿಚಾರಣೆಗೆ ಹಾಜರಾಗದಿದ್ದಕ್ಕೆ ದರ್ಶನ್​ರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ದರ್ಶನ್​ ಅವರನ್ನು ಕೊಪ್ಪ ಡಿ.ಎಫ್.ಓ. ಅಮಾನತು ಮಾಡಿದ್ದರು.
ಅರಣ್ಯಾಧಿಕಾರಿ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರು ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು. ಇದಾದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದರೂ ದರ್ಶನ್​ ಮಾತ್ರ ವಿಚಾರಣೆ ಎದುರಿಸದೇ ಭಂಡತನ ಪ್ರದರ್ಶಿಸಿದರು. ಬಳಿಕ ಅಮಾನತು ಮಾಡಲಾಯಿತು. ಇದರ ಬೆನ್ನಲ್ಲೇ ಬಂಧನವಾಗಿದೆ.
ನಿನ್ನೆಯಷ್ಟೇ ಹುಲಿ ಉಗುರು ಧರಿಸಿದ ಆರೋಪದಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರು ಅರ್ಚಕರನ್ನು ಅರಣ್ಯ ಇಲಾಖೆ ಬಂಧನ ಮಾಡಿದೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಅಲ್ಲದೆ, ಅನೇಕರಿಗೆ ಈಗಾಗಲೇ ಬೆದರಿಕೆ ಸಹ ಉಂಟಾಗಿದ್ದು, ತಮ್ಮ ಬಳಿ ಇರುವ ಹುಲಿ ಉಗುರನ್ನು ಮರೆ ಮಾಚಲು ಯತ್ನಿಸುತ್ತಿದ್ದಾರೆ. ಇದರ ನಡುವೆ ಅರಣ್ಯಾಧಿಕಾರಿಗಳ ಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗುತ್ತಿದೆ. ಪ್ರಭಾವಿಗಳ ವಿಚಾರದಲ್ಲಿ ಸುಮ್ಮನಾಗುವ ಅರಣ್ಯಾಧಿಕಾರಿಗಳು ಸಾಮಾನ್ಯ ಜನರ ಮೇಲೆ ತಮ್ಮ ದರ್ಪ ಮೆರಯುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕುತ್ತಿದ್ದಾರೆ.
ಹುಲಿ ಉಗುರು ಕೇಸ್​: ಜಾಮೀನು ಪಡೆದ ವರ್ತೂರು ಸಂತೋಷ್​​ ಮತ್ತೆ ಬಿಗ್​ಬಾಸ್​ ಮನೆಗೆ ಹೋಗ್ತಾರಾ? ಇಲ್ಲಿದೆ ಉತ್ತರ…

ಅರಣ್ಯಾಧಿಕಾರಿಗಳಿಗೆ ಹುಲಿ ಉಗುರು ಹೋಲುವ ಪೆಂಡೆಂಟ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌

ಹುಲಿ ಉಗುರು ಕೇಸ್​ನಲ್ಲಿ ಕೆಲವರ ಬಂಧನ: ಸಚಿವೆಯ ಪುತ್ರ, ಅಳಿಯನ ಮೇಲೆ ಕ್ರಮ ಯಾಕಿಲ್ಲ ಎಂದು ನೆಟ್ಟಿಗರ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
