ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಮರುಕಳಿಸಿದೆ. ಮೂವರು ಕಾರ್ಮಿಕರಿಗೆ ಕಾಯಿಲೆ ಭೀತಿ ಎದುರಾಗಿದೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಮೂವರಿಗೆ ಮಂಗನ ಕಾಯಿಲೆ ಹರಡಿರುವುದು ದೃಢಪಟ್ಟಿದೆ.ಇಬ್ಬರು ಮಧ್ಯಪ್ರದೇಶದ ಪುರುಷ ಕಾರ್ಮಿಕರು ಹಾಗೂ ಅಸ್ಸಾಂನ ಮಹಿಳಾ ಕಾರ್ಮಿಕರಿಗೆ ಕಾಯಿಲೆ ಹರಡಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಮಂಗಲ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾ ಆರೋಗ್ಯ ಇಲಾಖೆ, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಮಡಬೂರು ಗ್ರಾಮದದಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 6 ವರ್ಷದಿಂದ 65 ವಯೋಮಾನದ ಎಲ್ಲರಿಗೂ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಲು ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ. ಅಲ್ಲದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ವೈದ್ಯರು ಹಾಗೂ ನರ್ಸ್​ಗಳಿಗೆ ರೋಗ ಹರಡದಂತೆ ಕ್ರಮ ವಹಿಸಲಾಗಿದೆ ಎಂದು ವೈದ್ಯ ಡಾ.ಸುಭಾಷ್​ ತಿಳಿಸಿದ್ದಾರೆ.
ಮಂಗನ ಕಾಯಿಲೆ ಪತ್ತೆಯಾಗಿರುವ ಮಡಬೂರು ಗ್ರಾಮಕ್ಕೆ ಡಾ.ಸುಭಾಷ್​ ನೇತೃತ್ವದ ತಂಡ ತೆರಳಿ ಪರಿಶೀಲನೆ ನಡೆಸಿದೆ.(ದಿಗ್ವಿಜಯ ನ್ಯೂಸ್​)

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × four =
Remember me
