ಚಿಕ್ಕಮಗಳೂರು:ಒಡಿಶಾ ಭೀಕರ ರೈಲು ಅಪಘಾತದಲ್ಲಿ ಬದುಕುಳಿದಿದ್ದ ಕರ್ನಾಟಕ ಮೂಲದ ಯಾತ್ರಿಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೆ ಸ್ಟೆಷನ್​​ನಲ್ಲಿ ನಡೆದಿದೆ.
ಧರ್ಮಪಾಲಯ್ಯ (61) ಮೃತ ದುರ್ದೈವಿ. ಇವರು ಕಳಸ ತಾಲೂಕಿನ ಕಳಕೋಡು ಗ್ರಾಮದ ನಿವಾಸಿ. ಕಳಸದಿಂದ ಸಮ್ಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಕನ್ನಡಿಗರಲ್ಲಿ ಧರ್ಮಪಾಲಯ್ಯ ಕೂಡ ಇದ್ದರು. ಯಾತ್ರಿ ಮುಗಿಸಿ ಹಿಂದಿರುಗುವಾಗ ಮಿರ್ಜಾಪುರ ರೈಲು ನಿಲ್ದಾಣದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:ಮದ್ವೆ ದಿನ ನಿಶ್ಚಯಕ್ಕೆಂದು ಊರಿಗೆ ಬರ್ತಿದ್ದ ಬೆಳಗಾವಿ ಯೋಧ ರೈಲಿನಿಂದ ಜಾರಿ ಬಿದ್ದು ಸಾವು
ಧರ್ಮಪಾಲಯ್ಯರ ಮೃತದೇಹಕ್ಕಾಗಿ ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಸಂಬಂಧಿಕರು ಕಾಯುತ್ತಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹ ಹಸ್ತಾಂತರವಾಗಲಿದೆ.
ಜೂನ್​ 2ರಂದು ಒಡಿಶಾದ ಬಾಲಾಸೋರ್​ ರೈಲು ನಿಲ್ದಾಣದ ಸಮೀಪದಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಪಘಾತಕ್ಕೀಡಾದ ರೈಲಿನಲ್ಲಿ ಧರ್ಮಪಾಲಯ್ಯ ಅವರು ಕೂಡ ಪ್ರಯಾಣ ಮಾಡಿದ್ದರು. ಆದರೆ, ಅದೃಷ್ಟವಶಾತ್​ ಅಪಘಾತದಿಂದ ಪಾರಾಗಿದ್ದರು. ಆದರೆ, ಇದೀಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ನೋವುನಿವಾರಕದ ಡಬ್ಬಿ​ ನುಂಗಿ 9 ತಿಂಗಳ ಮಗು ಸಾವು; ಮದ್ವೆಯಾಗಿ 10 ವರ್ಷದ ಬಳಿಕ ಜನಿಸಿದ್ದ ಪುತ್ರಿ!
ಶುಕ್ರವಾರ (ಜೂ. 2) ಪಶ್ಚಿಮ ಬಂಗಾಳದ ಹೌರಾ ನಗರದಿಂದ ತಮಿಳುನಾಡಿನ ಚೆನ್ನೈಗೆ ತೆರಳುತ್ತಿದ್ದ ಕೊರಮಂಡಲ್​ ಎಕ್ಸ್​ಪ್ರೆಸ್​ ರೈಲಿನ ಕೆಲವು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದವು. ಈ ವೇಳೆ ಮತ್ತೊಂದು ಕಡೆಯಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್​ಫಾಸ್ಟ್​ ಟ್ರೈನ್​, ಹಳಿಗಳ ಮೇಲೆ ಬಿದ್ದಿ ಕೋರಮಂಡಲ್​ ಎಕ್ಸ್​ಪ್ರೆಸ್​ ಟ್ರೈನ್​ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 278 ಮೃತಪಟ್ಟು 1100ಕ್ಕೂ ಹೆಚ್ಚು ಮಂದಿ ಗಾಯಗೊಂಡರು.(ದಿಗ್ವಿಜಯ ನ್ಯೂಸ್​)
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಗ ಜಸ್ಟ್​ ಪಾಸ್: ಸಂಭ್ರಮಿಸಿದ ಪಾಲಕರು, ನೆಟ್ಟಿಗರ ಪ್ರತಿಕ್ರಿಯೆ ವೈರಲ್​

ಒಳಉಡುಪಲ್ಲಿ ಫೋಟೋಶೂಟ್​ ಮಾಡಿಸೋ ಧೈರ್ಯ ಸೌತ್​ ನಟಿಯರಿಗಿಲ್ಲ ಎಂದ ನೆಟ್ಟಿಗನಿಗೆ ಸಾಕ್ಷಿ ತಿರುಗೇಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 16 =
Remember me
